ಸೊರಬ: ‘ಕನ್ನಡ ಭಾಷೆ, ನೆಲ, ಜಲದ ಪ್ರಶ್ನೆ ಎದುರಾದಾಗ ಎಲ್ಲರೂ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದ ಅಗ್ನಿಶಾಮಕದಳದ ಕಚೇರಿ ಪಕ್ಕದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಸಾಹಿತ್ಯ ಪರಿಷತ್ನ ಕನ್ನಡ ಭವನ ಹಾಗೂ 10ನೇ ಸಾಹಿತ್ಯ ಸಮ್ಮೇಳನವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

‘ಕಲಿಕೆಗೆ ಸಾವಿರ ಭಾಷೆ ಇದ್ದರೂ, ತಾಯಿ ಭಾಷೆಯಾದ ಕನ್ನಡಕ್ಕೆ ಅದರದ್ದೇ ಆದ ಗೌರವವಿದೆ. ಇಂಗ್ಲಿಷ್ ಭಾಷೆ ಜೀವನಕ್ಕೆ ದಾರಿಯಾದರೆ, ಕನ್ನಡ ಜೀವವಾಗಬೇಕು. ಈ ನಿಟ್ಟಿನಲ್ಲಿ ಶಾಲಾ–ಕಾಲೇಜುಗಳಲ್ಲಿ ಸಾಹಿತ್ಯಾಭಿರುಚಿ ಹಾಗೂ ಕನ್ನಡದ ಒಲವು ಮೂಡಿಸಲು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಿದೆ. ಇದಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಅನುಕೂಲವಾಗಲಿವೆ. ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದರು.

‘ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸೇರಿ ಅನೇಕರ ಸಹಕಾರವಿದೆ. ಕಟ್ಟಡ ನಿರ್ಮಾಣದ ಉದ್ದೇಶ ಸಾಕಾರವಾಗಬೇಕಾದರೆ ಇಲ್ಲಿ ಹೆಚ್ಚು ಕಾರ್ಯಕ್ರಮಗಳು ನಡೆಯಬೇಕು. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ ತೃಪ್ತಿ ನನಗಿದೆ. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಜನರಿಗೆ ಅನೇಕ ಜನಪರ ಯೋಜನೆಗಳನ್ನು ನೀಡಿದ್ದು, ಆ ಮೂಲಕ ಜನಮಾನಸದಲ್ಲಿ ಇಂದಿಗೂ ಜೀವಂತವಾಗಿದ್ದಾರೆ. ರೈತರ, ಬಡವರ ಹಾಗೂ ದೀನ–ದಲಿತರ ಪರ ಧ್ವನಿ ಎತ್ತಿದ ಮಹಾನ್ ನಾಯಕನನ್ನು ಯಾರೂ ಮರೆತಿಲ್ಲ. ಹಾಗಾಗಿ ಕೆಲವು ಚುನಾವಣೆಯಲ್ಲಿ ಸೋತರೂ ಹತಾಶ ಭಾವನೆ ನನ್ನನ್ನು ಕಾಡಿಲ್ಲ’ ಎಂದರು.

‘ತಾಲ್ಲೂಕಿನಲ್ಲಿ ಅತಿ ಹೆಚ್ಚು ಕೆರೆಗಳಿದ್ದು, ಅವುಗಳ ಸಂವರ್ಧನೆ ಮಾಡುವ ಜೊತೆಗೆ ಸಚಿವ ಸಂಪುಟದಿಂದ ಸೊರಬವನ್ನು ಕೆರೆಗಳ ನಾಡು ಎಂದು ಘೋಷಿಸಬೇಕು. ಉಳವಿ ಭಾಗದಲ್ಲಿ ಯಥೇಚ್ಛವಾಗಿ ಅಶೋಕ ವೃಕ್ಷಗಳಿದ್ದು, ಅವುಗಳ ರಕ್ಷಣಾ ಕಾರ್ಯವಾಗಬೇಕಿದೆ. ಅಲ್ಲದೇ ಪ್ರವಾಸಿ ತಾಣವಾದ ಪಕ್ಷಿಧಾಮದ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕಿದೆ’ ಎಂದು ಸಮ್ಮೇಳನಾಧ್ಯಕ್ಷ ಶ್ರೀಪಾದ್ ಬಿಚ್ಚುಗತ್ತಿ ಅವರು ಸಚಿವ ಮಧು ಬಂಗಾರಪ್ಪಗೆ ಮನವಿ ಮಾಡಿದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು 10ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ಅದ್ದೂರಿ ಚಾಲನೆ ದೊರೆಯಿತು. ಅಲಂಕೃತ ರಥದಲ್ಲಿ ಸಮ್ಮೇಳನಾಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ ಅವರನ್ನು ಕೂರಿಸಿ ರಂಗನಾಥ ದೇವಸ್ಥಾನದಿಂದ ಸಾಹಿತ್ಯ ಸಮ್ಮೇಳನದ ವೇದಿಕೆವರೆಗೆ ಕರೆತರಲಾಯಿತು. ಸುತ್ತ ನೆರೆದಿದ್ದ ಕನ್ನಡಾಭಿಮಾನಿಗಳಲ್ಲಿ ನಾಡು ನುಡಿಯ ಝೇಂಕಾರ ಮೊಳಗಿತು. ಈ ವೇಳೆ ಸಮ್ಮೇಳನಾಧ್ಯಕ್ಷರ ರಥದ ಮುಂದೆ ನೂರಾರು ಕಲಾತಂಡಗಳು ತಮ್ಮ ಕಲೆಯನ್ನು ಪ್ರದರ್ಶಿಸಿದವು.

ಸಮ್ಮೇಳನದ ಕಾರ್ಯಾಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಮಂಜುನಾಥ್, ವೈದ್ಯ ಎಂ.ಕೆ. ಭಟ್, ಪುರಸಭೆ ಮಾಜಿ ಅಧ್ಯಕ್ಷ ಮಧುರಾಯ್ಜಿ ಶೇಟ್, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಕುಮಾರಸ್ವಾಮಿ, ಕಸಾಪ ಮಾಜಿ ಅಧ್ಯಕ್ಷರಾದ ಶಿವಾನಂದ ಬಿಳಗಿ, ಎಸ್. ಕೃಷ್ಣಾನಂದ್, ಶಿವಾನಂದ ಪಾಣಿ, ಹಾಲೇಶ್ ನವುಲೆ, ಬಸವನಗೌಡ ಮಲ್ಲಾಪುರ, ಶಿವಕುಮಾರ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಭಾರ್ಗವ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಜಯಶೀಲಗೌಡ, ತಾ.ಪಂ ಇಒ ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ, ಸಾವಿತ್ರಮ್ಮ ಬಿಚ್ಚುಗತ್ತಿ, ಪರಮೇಶ್ವರಪ್ಪ, ಹುಚ್ಚರಾಯಪ್ಪ, ನವೀನ್ ಕುಮಾರ್, ಮಹೇಶ್ ಖಾರ್ವಿ, ಲಿಂಗರಾಜ್ ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-42-1140674534

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.