ಸೊರಬ: ‘ನಾಡು– ನುಡಿ– ಸಂಸ್ಕೃತಿ ಕಟ್ಟುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ದೊಡ್ಡದು. ಈ ನಿಟ್ಟಿನಲ್ಲಿ ಸೊರಬ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಭಿನ್ನವಾಗಿದ್ದು, ಬೃಹತ್ ಆಹಾರ ಮೇಳ ಏರ್ಪಡಿಸಿ, ಸತತ 4ನೇ ಬಾರಿಗೆ ಯಶಸ್ವಿಗೊಳಿಸುತ್ತಿರುವುದು ಶ್ಲಾಘನೀಯ’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಂಜುನಾಥ ಅಭಿಪ್ರಾಯಪಟ್ಟರು.

ಪಟ್ಟಣದ ಗಿರಿಜಾ ಶಂಕರ ಸಭಾ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಹಾಗೂ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಜಗಲಿ ವತಿಯಿಂದ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು.

‘ಆಹಾರ ಮೇಳದ ಮೂಲಕ ಅಕ್ಷರ ಜಾತ್ರೆ ಜೊತೆಗೆ ಆಹಾರವೂ ಸೇರಿಕೊಂಡಂತಾಗಿದೆ. ಕೊಡು ಕೊಳ್ಳುವಿಕೆ ಆಗುತ್ತಿರುವುದು ಸಂತಸ ತಂದಿದೆ. ಜಿಲ್ಲೆಯ ಎಲ್ಲ ತಾಲ್ಲೂಕಿನವರೂ ಇದೇ ರೀತಿ ಕಾರ್ಯೋನ್ಮುಖರಾದರೆ ಉತ್ತಮ ಬೆಳವಣಿಗೆ. ಸಾಹಿತ್ಯ ಪರಿಷತ್ತು ಈ ರೀತಿಯಲ್ಲೂ ಕೆಲಸ ಮಾಡಬಹುದು ಎಂಬುದನ್ನು ಇವರು ತೋರಿಸಿದ್ದಾರೆ’ ಎಂದು ಹೇಳಿದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಷಣ್ಮುಖಾಚಾರ್ ಅಧ್ಯಕ್ಷತೆ ವಹಿಸಿದ್ದರು. ಅಕ್ಕ ಕೆಫೆಯ ಶಂಕರ್ ಎನ್. ಶೆಟ್ಟಿ, ಜಯಮಾಲಾ ಅಣ್ಣಾಜಿಗೌಡ ಮಾತನಾಡಿದರು.

ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ದಿನಾಕರ ಭಟ್ ಭಾವೆ, ಕಸಾಪ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಕೆ.ಎಸ್. ಹುಚ್ಚರಾಯಪ್ಪ, ಸಾಹಿತಿ ಬಿ.ಚಂದ್ರೇಗೌಡ, ಇತಿಹಾಸ ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ, ಪುರಸಭೆ ನಾಮನಿರ್ದೇಶಿತ ಸದಸ್ಯ ಪರಶುರಾಮಪ್ಪ ಸಣ್ಣಬೈಲ್, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್, ಸುಜಾತಾ ಜೋತಾಡಿ, ಧರ್ಮಪ್ಪ ಯಲಸಿ, ಮಹೇಶ್ ಖಾರ್ವಿ, ಡಿ. ಶಿವಯೋಗಿ, ಸರಸ್ವತಿ ನಾವುಡ ಸೇರಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-42-1636618766

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.