ಸೊರಬ: ಪಟ್ಟಣದ ಪುರದೈವ ರಂಗ ನಾಥ ಸ್ವಾಮಿ ಬ್ರಹ್ಮರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಹಳೇ ರಥ ಶಿಥಿಲವಾಗಿದ್ದ ಕಾರಣ ನೂತನ ರಥ ನಿರ್ಮಾಣ ಮಾಡಲಾಗಿದೆ. ಇದನ್ನು ದೇವರಿಗೆ ಸಮರ್ಪಣೆ ಮಾಡಿದ ತರುವಾಯ ನಡೆದ ಮೊದಲ ರಥೋತ್ಸವ ಇದಾಗಿದ್ದು, ಸಾವಿರಾರು ಸಂಖ್ಯೆಯ ಭಕ್ತರು ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು.

ರಥೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ ಪೂಜೆ, ಅಭಿಷೇಕ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್ ಮರಾಠೆ ಅವರು ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು.

ಭಕ್ತರು ಕಳಸಕ್ಕೆ ಬಾಳೆಹಣ್ಣು, ಉತ್ತುತ್ತಿ, ಕಾಳುಮೆಣಸು ಬೀರುವ ಮೂಲಕ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಮುಂಭಾಗ ಕೊಂಚ ದೂರ ಮಾತ್ರ ರಥ ಎಳೆಯಲಾಯಿತು. ಹಳೇಸೊರಬ ಗ್ರಾಮಸ್ಥರು ಚಪ್ಪರ ಕಟ್ಟುವ ಹಾಗೂ ಹಿರೇಶಕುನ ಮತ್ತು ಸೊಪ್ಪಿನಕೇರಿ ಗ್ರಾಮಸ್ಥರು ತೇರು ಕಟ್ಟುವ ಶಾಸ್ತ್ರವನ್ನು ನೆರವೇರಿಸಿದರು. ರಥೋತ್ಸವದ ಅಂಗವಾಗಿ ದೇವಸ್ಥಾನದ ಸಮೀಪ ಅನ್ನಸಂತರ್ಪಣೆ ನಡೆಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-42-1263687472

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.