ಸೊರಬ: ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಹಾದು ಹೋಗಿರುವ ಕೆಲವು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸೂಚನಾ ಫಲಕಗಳು ಇಲ್ಲದಿರುವುದರಿಂದ ಈ ಮಾರ್ಗದಲ್ಲಿ ಹೊಸದಾಗಿ ಬರುವ ವಾಹನ ಸವಾರರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ.

ತಾಲ್ಲೂಕಿನ ಕೆಲವು ರಸ್ತೆಗಳಲ್ಲಿ ಸೂಚನಾ ಫಲಕಗಳು ಇಲ್ಲದೇ ಇರುವುದರಿಂದ ರಸ್ತೆಯಲ್ಲಿ ಸಂಚರಿಸುವ ಹೊಸಬರು ಗೊಂದಲಕ್ಕೆ ಒಳಗಾಗುವಂತಾಗಿದೆ. ರಸ್ತೆಗಳಲ್ಲಿ ಈ ಹಿಂದೆ ಸೂಚನಾ ಫಲಕಗಳಿದ್ದವು. ಬಹುತೇಕ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಸಂದರ್ಭ ಫಲಕಗಳನ್ನು ತೆರವುಗೊಳಿಸಲಾಗಿದೆ.

ಕೆಲವು ತಿಂಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಅವರು ಲೋಕೋಪಯೋಗಿ ಇಲಾಖೆಗೆ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸೂಚಿಸಿದ್ದರು. ರಸ್ತೆ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ ಸಚಿವರು ಅಧಿಕಾರಿಗಳಿಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದ್ದರು. ರಸ್ತೆ ಅಭಿವೃದ್ಧಿ ಆದರೂ ಸೂಚನಾ ಫಲಕ ಅಳವಡಿಕೆ ಇದುವರೆಗೂ ಆಗಿಲ್ಲ.

ಸೊರಬ– ಶಿರಸಿ– ಆನವಟ್ಟಿ ಮಾರ್ಗದಲ್ಲಿ ಅಳವಡಿಸಿದ್ದ ಬಹುತೇಕ ಸೂಚನ ಫಲಕಗಳು ಮುರಿದು ಬಿದ್ದಿವೆ. ಅಪಘಾತ ವಲಯಗಳಲ್ಲಿ ಸೂಚನಾ ಫಲಕಗಳಿಲ್ಲ. ಇನ್ನು ಕೆಲವೆಡೆ ಹಂಪ್ಸ್ ಇಲ್ಲದಿದ್ದರೂ ಇದೆ ಎನ್ನುವ ಸೂಚನಾ ಫಲಕ ಕಾಣಸಿಗುತ್ತದೆ. ಈಚೆಗಷ್ಟೇ ತಾಲ್ಲೂಕಿನ ಕುಪ್ಪಗಡ್ಡೆ ಬಳಿ ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿದ್ದು, ಸೂಚನಾ ಫಲಕಗಳು ಇಲ್ಲದಿರುವುದೇ ಇದಕ್ಕೆ ಕಾರಣ ಎಂಬ ಮಾತು ಕೇಳಿಬಂದಿದೆ. ಲೋಕೋಪಯೋಗಿ ಇಲಾಖೆಗೆ ಒಳಪಡುವ ಬಹುತೇಕ ಮಾರ್ಗಗಳಲ್ಲಿ ರಸ್ತೆ ಸುರಕ್ಷತೆಯ ಸೂಚನಾ ಫಲಕಗಳ ಕೊರತೆ ಎದ್ದು ಕಾಣುತ್ತಿದೆ.

ಕೆಲವು ಸಂಸ್ಥೆಗಳ ಸಹಯೋಗದಲ್ಲಿ ಪೊಲೀಸ್ ಇಲಾಖೆ ಅಪಘಾತ ವಲಯದ ತಿರುವುಗಳಲ್ಲಿ ಫಲಕಗಳನ್ನು ಅಳವಡಿಸಿದ್ದಾರೆ. ಇನ್ನೇನು ಮಳೆಗಾಲ ಪ್ರಾರಂಭವಾಗಲಿದ್ದು, ರಸ್ತೆಯಲ್ಲಿ ಮುಂದಿರುವ ತಿರುವುಗಳು ಸವರಾರರಿಗೆ ಕಾಣುವುದಿಲ್ಲ. ಆದರೆ, ಲೋಕೋಪಯೋಗಿ ಇಲಾಖೆ ಸುರಕ್ಷತೆಯ ಸೂಚನಾ ಫಲಕಗಳ ಅಳವಡಿಕೆಗೆ ಚಿಂತನೆ ನಡೆಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದರೆ.

ಗ್ರಾಮೀಣ ರಸ್ತೆಗಳ ತಗ್ಗು ಗುಂಡಿಗಳಿಗೆ ತೇಪೆ ಹಚ್ಚಿದ್ದರೂ ಕಾಮಗಾರಿ ಉತ್ತಮವಾಗಿಲ್ಲ. ರಸ್ತೆ ತಿರುವುಗಳು, ರಸ್ತೆ ಪಕ್ಕದಲ್ಲಿ ದೊಡ್ಡ ತಗ್ಗುಗಳಿದ್ದರೂ, ಕೆರೆಗಳಿದ್ದರೂ ಆ ಸ್ಥಳಗಳಲ್ಲಿ ಎಚ್ಚರಿಕೆ ಫಲಕ ಅಳವಡಿಸಿಲ್ಲ. ಇದರಿಂದಾಗಿ ಅಪಘಾತದ ಸಾಧ್ಯತೆ ಹೆಚ್ಚು. ಕೆಲವು ಗ್ರಾಮದ ಬೋರ್ಡ್ಗಳು ಹಳೆಯದಾಗಿದ್ದು, ಮುರಿದು ಬಿದ್ದಿವೆ. ರಸ್ತೆ ಪಕ್ಕದಲ್ಲಿ ಅಲ್ಲಲ್ಲಿ ಬೆಳೆದು ನಿಂತಿರುವ ಗಿಡ– ಗಂಟಿಗಳಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಬದಿಯಲ್ಲಿ ಬೆಳೆದು ನಿಂತಿರುವ ಗಿಡಗಳನ್ನು ತೆರವುಗೊಳಿಸುವ ಕಾರ್ಯವಾಗಬೇಕು ಎಂದು ತಾಲ್ಲೂಕಿನ ಹೊಸೂರು ಗ್ರಾಮದ ಶರತ್ ಹೇಳಿದರು.

ಬಹುತೇಕ ರಸ್ತೆಗಳಲ್ಲಿ ಸಮರ್ಪಕವಾಗಿ ಸೂಚನಾ ಫಲಕಗಳು ಇಲ್ಲದೆ ಸವಾರರು ದಿಕ್ಕು ತಪ್ಪುತ್ತಿದ್ದಾರೆ. ಸಂಬಂಧಿಸಿದ ಇಲಾಖೆಗಳು ಸೂಚನೆ, ಎಚ್ಚರಿಕೆ ಫಲಕ ಅಳವಡಿಸಲು ಕ್ರಮ ವಹಿಸಬೇಕು
ಧರ್ಮರಾಜ್ ಎಚ್, ವಾಹನ ಸವಾರ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-42-1845713878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.