ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶರಾವತಿ ಹಿನ್ನೀರಿನ ಯೋಜನೆಗೆ ₹400 ಕೋಟಿ: ಮಧು ಬಂಗಾರಪ್ಪ

Published 21 ಜನವರಿ 2024, 15:37 IST
Last Updated 21 ಜನವರಿ 2024, 15:37 IST
ಅಕ್ಷರ ಗಾತ್ರ

ಸೊರಬ: ತಾಲ್ಲೂಕಿನ ಪ್ರತಿಯೊಂದು ಗ್ರಾಮಕ್ಕೂ ಶರಾವತಿ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸಲು ₹400 ಕೋಟಿ ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ತಾಲ್ಲೂಕಿನ ಕೊಡಕಣಿ, ನೆಗವಾಡಿ, ಗಿಣಿವಾಲ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮುಂದಿನ 3 ವರ್ಷದ ಅವಧಿಯಲ್ಲಿ ತಾಲ್ಲೂಕಿನ ಪ್ರತಿಯೊಂದು ಗ್ರಾಮಕ್ಕೂ ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಕೃಷಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲು ನೀಲನಕ್ಷೆ ತಯಾರಿಸಲಾಗಿದೆ. ಈ ಯೋಜನೆ ವ್ಯಾಪ್ತಿಗೆ ಆನವಟ್ಟಿ ಹಾಗೂ ಶಿರಾಳಕೊಪ್ಪ ಪಟ್ಟಣ ಸೇರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪುರಸಭೆ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡಲು ₹18.75 ಕೋಟಿ ವೆಚ್ಚದಲ್ಲಿ ತಿಮಲಾಪುರ, ಕುಣಿಜಬೈಲ್ ಹಾಗೂ ಹಳೇಸೊರಬದಲ್ಲಿ ನೀರಿನ ಟ್ಯಾಂಕರ್ ನಿರ್ಮಿಸುವ ಕಾಮಗಾರಿ ಆರಂಭವಾಗಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಬಗರ್ ಹುಕುಂ ಸಾಗುವಳಿದಾರರ ಪರವಾಗಿ ಸರ್ಕಾರವಿದ್ದು, ಹಕ್ಕುಪತ್ರ ವಜಾಗೊಂಡಿರುವ ಸಾಗುವಳಿದಾರರಿಗೆ ಮತ್ತೆ ಹಕ್ಕುಪತ್ರ ನೀಡಲಾಗುವುದು. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿದವರಿಗೂ ಹಕ್ಕುಪತ್ರ ಕೊಡುವ ಬಗ್ಗೆ ಚಿಂತಿಸಲಾಗಿದೆ‌. ಈ ಬಗ್ಗೆ ಸಾಗುವಳಿದಾರರು ಭಯಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ತಹಶೀಲ್ದಾರ್ ಹುಸೇನ್ ಸರಾಕವಸ್, ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ಪುರಸಭೆ ಸದಸ್ಯರಾದ ಎಂ.ಡಿ.ಉಮೇಶ್, ಪ್ರಸನ್ನಕುಮಾರ್, ಗ್ರಾಮ ಸಲಹಾ ಸಮಿತಿ ಅಧ್ಯಕ್ಷ ಶ್ರೀಧರ್, ಮುಖಂಡರಾದ ನೆಹರೂ, ತಬಲಿ ಬಂಗಾರಪ್ಪ, ಗಣಪತಿ, ಕೆ.ಪಿ.ಗೌಡ, ಪ್ರಕಾಶ್ ಹಳೇಸೊರಬ, ಅಣ್ಣಪ್ಪ, ಹೂವಪ್ಪ, ನಾಗರಾಜ್ ಚಿಕ್ಕಸವಿ, ಉಳವಿ ಬಂಗಾರಪ್ಪ, ಶಿವಪ್ಪ, ವಡ್ಡಿ ಸೋಮಪ್ಪ, ಶಶಿಕುಮಾರ್, ರಾಘು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT