ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೊರಬ | ಗಾಳಿ ಮಳೆಗೆ ಧರೆಗುರುಳಿದ ಮರ-ವಿದ್ಯುತ್ ಕಂಬಗಳು

Published 7 ಜುಲೈ 2024, 14:54 IST
Last Updated 7 ಜುಲೈ 2024, 14:54 IST
ಅಕ್ಷರ ಗಾತ್ರ

ಸೊರಬ: ತಾಲ್ಲೂಕಿನಾದ್ಯಂತ ಭಾನುವಾರ ಬೆಳಿಗ್ಗೆಯಿಂದ ಮಳೆ ಬಿರುಸುಗೊಂಡಿದ್ದು ಶೀತ ಗಾಳಿ‌ ಬೀಸುತ್ತಿದೆ.

ವಿವಿಧೆಡೆ ಬೀಸಿದ ಗಾಳಿ ಮಳೆಗೆ ಹತ್ತಾರು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ವಾಹನ ಸಂಚಾರ ಹಾಗೂ ವಿದ್ಯುತ್ ಸಮಸ್ಯೆ ತಲೆದೋರಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ.

ಗಾಳಿ, ಮಳೆಗೆ ತಾಲ್ಲೂಕಿನ ಹಾಲಗಳಲೆ, ಕಪ್ಪಗಳಲೆ, ಮಲಳಗದ್ದೆ, ಕುಳವಳ್ಳಿ, ಹರೂರು ಹಾಗೂ ಕಟ್ಟಿನಕಾರು ಮಾರ್ಗದ ರಸ್ತೆಗಳಲ್ಲಿ ಹತ್ತಾರು ಮರಗಳು ಧರೆಗುರುಳಿದ ಪರಿಣಾಮ 12 ವಿದ್ಯುತ್ ಕಂಬಗಳು ಬಿದ್ದಿವೆ. ಸಾಗರ–ಸೊರಬ ರಸ್ತೆಯಲ್ಲಿ ಕೆಲ ಸಮಯ ಸಂಚಾರ ಸ್ಥಗಿತಗೊಂಡಿದ್ದು, ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರ ಹಾಗೂ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.

ಸೊರಬ ಸಾಗರ ಮುಖ್ಯರಸ್ತೆಯಲ್ಲಿರುವ ಹಾಲಗಳಲೆ ಗ್ರಾಮದಲ್ಲಿ ಗಾಳಿ ಮಳೆಯಿಂದ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿರುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT