ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೀತಾ ಶಿವರಾಜಕುಮಾರ್ ಗೆಲುವಿಗೆ ಗ್ಯಾರಂಟಿ ಯೋಜನೆ ಸಹಕಾರಿ: ರಾಜೇಶ್ವರಿ ರಾಜಪ್ಪ

Published 2 ಏಪ್ರಿಲ್ 2024, 16:00 IST
Last Updated 2 ಏಪ್ರಿಲ್ 2024, 16:00 IST
ಅಕ್ಷರ ಗಾತ್ರ

ಸೊರಬ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ‌‌ ಮನಸ್ಸನ್ನು ಗೆದ್ದಿರುವುದರಿಂದ ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ‌ ಗೆಲುವಿಗೆ ಸಹಕಾರಿಯಾಗಲಿದೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ರಾಜೇಶ್ವರಿ ರಾಜಪ್ಪ ಅಭಿಪ್ರಾಯಪಟ್ಟರು. 

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ರಸ್ತೆ, ವಿದ್ಯುತ್ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಆಡಳಿತ ನೀಡುತ್ತಿರುವ ರಾಜ್ಯ ಸರ್ಕಾರದ ಮೇಲೆ ಹಿಂದುಳಿದ ವರ್ಗದ ಜನರು‌ ನಂಬಿಕೆ ಇಟ್ಟಿದ್ದಲ್ಲದೇ ಎಲ್ಲ ವರ್ಗದ ಜನರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಲಿದ್ದಾರೆ’ ಎಂದು ತಿಳಿಸಿದರು.

ಗೀತಾ ಶಿವರಾಜಕುಮಾರ್ ಅವರಿಗೆ ರಾಜಕೀಯ ಹೊಸತಲ್ಲ. ಬಂಗಾರಪ್ಪ ಅವರಿಂದ ಜನಸೇವೆ ಮಾಡುವುದನ್ನು ಕಲಿತಿದ್ದಾರೆ.‌ ಬಂಗಾರಪ್ಪ ಅವರು ಬಡವರ ಉದ್ಧಾರಕ್ಕಾಗಿ ಜನಪರ ಯೋಜನೆ ಜಾರಿ ತಂದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಬಡವರ ಪರವಾಗಿರುವುದರಿಂದ ಗೀತಾ ಶಿವರಾಜಕುಮಾರ್ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT