ಸೊರಬ: ‘ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಲು ಬಿಜೆಪಿ ನೇತೃತ್ವದ ಸರ್ಕಾರ ಮಸೂದೆ ಮಂಡಿಸಲು ಮುಂದಾದರೆ ಕಾಂಗ್ರೆಸ್ ಸೇರಿದಂತೆ ಮಿತ್ರ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರಿಗೆ ಶೇ 33ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸಲು ಮರು ಹೋರಾಟ ಮುಂದುವರಿಸಿದ್ದಾರೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪಟ್ಟಣದ ಗಿರಿಜಾಶಂಕರ ಭವನದಲ್ಲಿ ಗುರುವಾರ ಬಿಜೆಪಿ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ ಪ್ರಶಿಕ್ಷಣ ಶಿಬಿರದ ಮಹಾಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದ ಏಕತೆಗಾಗಿ 1951ರಲ್ಲಿ ಜನಸಂಘ ಸ್ಥಾಪನೆಯಾದರೆ, 1980ರಲ್ಲಿ ಬಿಜೆಪಿ ಒಂದು ರಾಜಕೀಯ ಪಕ್ಷವಾಗಿ ಅಸ್ತಿತ್ವಕ್ಕೆ ಬಂದಿತು. ಅಂದಿನಿಂದ ಇಂದಿನವರೆಗೂ ಹಲವು ಮಹನೀಯರ ತಪ್ಪಸ್ಸಿನ ಫಲವಾಗಿ ಬಿಜೆಪಿ ಹೆಮ್ಮರವಾಗಿ ಬೆಳೆದು ದೇಶ ಸೇವೆ ಮಾಡುತ್ತಿದೆ. ಒಂದು ರಾಜಕೀಯ ಪಕ್ಷಕ್ಕೆ ಗೊತ್ತು ಗುರಿ ಜೊತೆಗೆ ಇತಿಹಾಸದ ಪ್ರಜ್ಞೆ ಮುಖ್ಯ. ಈ ನಿಟ್ಟಿನಲ್ಲಿ ಪ್ರಶಿಕ್ಷಣವನ್ನು ಆಯೋಜಿಸಲಾಗಿದೆ’ ಎಂದು ಹೇಳಿದರು.

‘ಸೊರಬ ಕ್ಷೇತ್ರ ಸಮಾಜವಾದಿ ನೆಲೆ. ಬಿಜೆಪಿ ಅಭ್ಯರ್ಥಿಗಳನ್ನು ಎರಡು ಬಾರಿ ಗೆಲ್ಲಿಸಿರುವುದು ಸಂತೋಷ. ನಂಜುಂಡಪ್ಪ ವರದಿಯಲ್ಲಿ ತಾಲ್ಲೂಕು ಅತ್ಯಂತ ಹಿಂದುಳಿದ ಕ್ಷೇತ್ರವಾಗಿದೆ. ಸದ್ಯ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಅಭಿವೃದ್ಧಿ ಮರೆತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಅವರ ಕಾರ್ಯಚಟುವಟಿಕೆಯನ್ನು’ ರಾಘವೇಂದ್ರ ಟೀಕಿಸಿದರು.

‘ದೇಶದ ಕಟ್ಟಕಡೆಯ ವ್ಯಕ್ತಿಗೂ ಸೂರು ಕಲ್ಪಿಸುವ ಜೊತೆಗೆ ತಳ ಸಮುದಾಯದ ಸಮಗ್ರ ಅಭಿವೃದ್ಧಿ ಕನಸು ಕಂಡು ಬಿಜೆಪಿ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ಕೂಡ ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಬಗ್ಗೆ ಸ್ಪಂದಿಸಿ ಪರಿಹಾರ ಒದಗಿಸುವ ಜವಾಬ್ದಾರಿ ಹೊತ್ತು ನಿರಂತರ ಕೆಲಸ ಮಾಡುತ್ತಿರುವುದು ವಿಶೇಷ. ಈ ಚಿಂತನೆ ಬೇರೆ ಯಾವ ರಾಜಕೀಯ ಪಕ್ಷಕ್ಕೂ ಇಲ್ಲ’ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ರಾಜು ಎಂ. ತಲ್ಲೂರು, ಎಚ್.ಈ. ಜ್ಞಾನೇಶ್, ಮಹಿಳಾ ಘಟಕದ ಅಧ್ಯಕ್ಷೆ ಹೊಳಿಯಮ್ಮ, ಯುವ ಮೋರ್ಚಾ ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ, ತಾಲ್ಲೂಕು ಘಟಕದ ಉಪಾಧ್ಯಕ್ಷ ಬಸವನಗೌಡ ಮಲ್ಲಾಪುರ, ಮುಖಂಡರಾದ ಎ.ಎಲ್.ಅರವಿಂದ್, ಮಲ್ಲಿಕಾರ್ಜುನ ದ್ವಾರಳ್ಳಿ, ಗೀತಾ ಮಲ್ಲಿಕಾರ್ಜುನ, ಗುರುಪ್ರಸನ್ನಗೌಡ, ವಿಜಯೇಂದ್ರ ತಲಗಡ್ಡೆ, ಪ್ರಕಾಶ್ ತಲಕಾಲಕೊಪ್ಪ, ಶಿವಕುಮಾರ್ ಕಡಸೂರು, ಈಶ್ವರ ಚನ್ನಪಟ್ಟಣ, ದೇವೇಂದ್ರಪ್ಪ ಚನ್ನಾಪುರ, ಮಧುರಾಯ್ ಶೇಟ್, ಮಮತಾ ಅರವಿಂದ್, ಸುಧಾ, ಸುಧಾ ಶಿವಪ್ರಕಾಶ್, ಆಶಾ ರಂಗನಾಥ, ಆನಂದ ಜನ್ನೆಹಕ್ಲು, ಅರುಣ್ ಕುಗ್ವೆ, ಆಶಿಕ್, ಮಂಜಪ್ಪ ಲಕ್ಕವಳ್ಳಿ, ಕೇಶವ ಪೇಟ್ಕರ್, ಸಂದೀಪ್ ಮಳಲಗದ್ದೆ, ಪರಶುರಾಮ ಹಾಲಗಳಲೆ, ಸುರೇಶ್ ಉದ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-42-735243194

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.