ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.30 ರಿಂದ ನೈಋತ್ಯ ಪದವಿಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ ನೋಂದಣಿ ಕಾರ್ಯ

Published 10 ಸೆಪ್ಟೆಂಬರ್ 2023, 14:28 IST
Last Updated 10 ಸೆಪ್ಟೆಂಬರ್ 2023, 14:28 IST
ಅಕ್ಷರ ಗಾತ್ರ

ಶಿವಮೊಗ್ಗ: ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸೆ.30ರಿಂದ ನೋಂದಣಿ ಕಾರ್ಯ ಆರಂಭವಾಗಲಿದೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ತಿಳಿಸಿದರು.

ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಭಾನುವಾರ ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಚೇತ್ರಕ್ಕೆ 2024ರ ಜೂನ್, ಜುಲೈ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಪ್ರೌಢಶಾಲೆ ಹಾಗೂ ಅದಕ್ಕಿಂತ ಮೇಲಿನ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ, 6 ವರ್ಷಗಳಲ್ಲಿ 3 ವರ್ಷ ನಿರಂತರವಾಗಿ ಶಿಕ್ಷಕರಾಗಿ ಸೇವೆ ಸಲ್ಲಿಸಿದವರು ಮತದಾರರಾಗಲು ಅರ್ಹರು.‌‌‌‌ ಪದವೀಧರರ ಕ್ಷೇತ್ರಕ್ಕೆ ಪದವಿ ಪಡೆದು ಮೂರು ವರ್ಷ ಪೂರ್ಣಗೊಂಡಿದ್ದರೆ ಮಾತ್ರ ಮತ ಚಲಾಯಿಸಬಹುದು. ಪ್ರತಿ ವಿದ್ಯಾಸಂಸ್ಥೆಗೂ ಸಿಬ್ಬಂದಿ ನೇಮಕ ಮಾಡಿ, ದಾಖಲಾತಿ ಮಾಡಿಸಬೇಕು ಎಂದು ಸೂಚಿಸಿದರು.

‘ಲೋಕಸಭಾ ಚುನಾವಣೆ 2024ರ ಏಪ್ರಿಲ್‌ನಲ್ಲಿ ನಡೆಯಬಹುದು. ರಾಜ್ಯದಲ್ಲಿ ಮೈ ಮರೆತಿದ್ದರಿಂದ ಅಧಿಕಾರ ಕಳೆದುಕೊಂಡಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಮೈ ಮರೆತರೆ ಕಳೆದುಕೊಳ್ಳುವುದು ಅಧಿಕಾರ ಮಾತ್ರವಲ್ಲ, ದೇಶ ಹಾಗೂ ದೇಶದ ಅಭಿವೃದ್ಧಿ’ ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ‘ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಆರು ಜಿಲ್ಲೆಗಳನ್ನು ಒಳಗೊಂಡಿವೆ. ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರನ್ನು ಮಾತಿನಲ್ಲಿ ಮನವೊಲಿಸಲು ಸಾಧ್ಯವಿಲ್ಲ. ಅವರು ಮನಸಾರೆ ಒಪ್ಪಿಕೊಳ್ಳಬೇಕು. ಆದ್ದರಿಂದ ಚುನಾವಣೆಗೆ ಪೂರ್ವ ಸಿದ್ಧತೆ ನಡೆಸಿ, ಒಟ್ಟಾಗಿ ನಡೆಯಬೇಕು’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಬಿ.ವೈ ವಿಜೇಯೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ್ರು, ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ವಿಭಾಗ ಪ್ರಭಾರ ಗಿರೀಶ್ ಪಟೇಲ್, ಎ.ಎನ್.ನಟರಾಜ್, ಬಿ.ಕೆ.ಶ್ರೀನಾಥ್, ಶಿವರಾಜ್, ನವೀನ್ ಹೆದ್ದೂರು ಪಾಲ್ಗೊಂಡಿದ್ದರು.

ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಯಿಂದ ಕಾಂಗ್ರೆಸ್ ಒಡಲಲ್ಲಿ ಭೂಕಂಪವಾದಂತಾಗಿದೆ. ಅವರು ರಾಜ್ಯದ ಜನರಿಗೆ ಸತ್ಯ ತಿಳಿಸಲು ಹೊರಟಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷ ಹಳ್ಳ ಹಿಡಿಯಲಿದೆ.

-ಅರಗ ಜ್ಞಾನೇಂದ್ರ ಶಾಸಕ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT