ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತತ್ಕಾಲ್ ವಿಶೇಷ ರೈಲಿಗೆ ಹಸಿರು ನಿಶಾನೆ

Last Updated 23 ಜನವರಿ 2020, 23:15 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಕೋಟೆ ಗಂಗೂರಿನಲ್ಲಿ ರಾಜ್ಯದ ನಾಲ್ಕನೇ ರೈಲ್ವೆ ಕೋಚಿಂಗ್ ಟರ್ಮಿನಲ್ ಪ್ರಾರಂಭವಾದ ಬಳಿಕ ಶಿವಮೊಗ್ಗ ರೈಲು ನಿಲ್ದಾಣ ಟರ್ಮಿನಲ್ ಆಗಿ ಬದಲಾಗಲಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಗುರುವಾರ ಶಿವಮೊಗ್ಗ ಟೌನ್-ಯಶವಂತಪುರ ನಡುವೆ ವಾರದಲ್ಲಿ 4 ದಿನಗಳ ತತ್ಕಾಲ್ ವಿಶೇಷ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.

‘₹ 420 ಕೋಟಿ ವೆಚ್ಚದಲ್ಲಿ ಸಿಗಂದೂರು-ಕಳಸವಳ್ಳಿ ಸೇತುವೆ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದೆ. ಗೋವಾದಲ್ಲಿರುವಂತೆ ಕ್ರೂಸ್ ವಾಟರ್ ವರ್ಲ್ಡ್ ಅನ್ನು ಸಿಗಂದೂರಿನಲ್ಲಿ ನಿರ್ಮಿಸುವ ಯೋಜನೆ ಬಗ್ಗೆ ಚಿಂತನೆ ನಡೆಸಲಾಗಿದೆ. ಕೊಲ್ಲೂರು– ಕೊಡಚಾದ್ರಿ ನಡುವೆ 11 ಕಿ.ಮೀ. ಉದ್ದದ ಕೇಬಲ್ ಕಾರ್ ಯೋಜನೆ ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT