ಬುಧವಾರ, ನವೆಂಬರ್ 25, 2020
19 °C

ಜಿಲ್ಲೆಯಲ್ಲೂ ಅಸಂಘಟಿತರ ಗುರುತಿಸುವಿಕೆಗೆ ವೇಗ: ಆಯನೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲೂ ಅಸಂಘಟಿತ ಕಾರ್ಮಿಕರನ್ನು ಗುರುತಿಸುವ ಕೆಲಸ ನಡೆದಿದೆ. ಸೌಲಭ್ಯಗಳಿಗಾಗಿ ಕಾರ್ಮಿಕ ಕಾರ್ಡ್‌ ವಿತರಿಸಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಹಮಾಲಿಗಳು, ಟೈಲರ್, ಚಿಂದಿ ಆಯುವವರು, ಮೆಕ್ಯಾನಿಕ್‌ಗಳು, ಮನೆ ಕೆಲಸದವರು, ಅಗಸರು, ಕುಂಬಾರರು, ಕಮ್ಮಾರರು, ಕ್ಷೌರಿಕರು, ಬಟ್ಟಿ ಕಾರ್ಮಿಕರು ಸೇರಿ ಹಲವು ಬಗೆಯ ಕಾರ್ಮಿಕರನ್ನು ಗುರುತಿಸಲಾಗುತ್ತಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿ, ಗುರುತಿನ ಚೀಟಿ ನೀಡಲಾಗುತ್ತದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ, ವಿದ್ಯಾರ್ಥಿವೇತನ, ಉಚಿತ ವಿಮಾ ಸೌಲಭ್ಯ ಸೇರಿ‌ ಹಲವು ಸೇವೆಗಳನ್ನು ಪಡೆಯಬಹುದು. ಶೋಷಣೆಗೆ ಒಳಗಾದವರ ಸಹಾಯಕ್ಕಾಗಿ ಈ ಸಂಘ ಸ್ಥಾಪನೆಯಾಗಿದೆ. ವಿಶೇಷವಾಗಿ ಮಹಿಳೆಯರು ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಸ್ವಾಗತಾರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ 32 ಕಾರ್ಮಿಕ ಮಂಡಳಿಗಳ ರಚನೆ ಮಾಡಿದೆ. ಅದಕ್ಕಾಗಿ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವರನ್ನು ಅಭಿನಂದಿಸಲಾಗುವುದು ಎಂದರು.

ಕೆಲವು ಅಸಂಘಟಿತ ಕಾರ್ಮಿಕರಿಗೆ ಸಾಂಕೇತಿಕವಾಗಿ ಗುರುತಿನ ಪತ್ರ ವಿತರಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಅಧ್ಯಕ್ಷ ಕುಪೇಂದ್ರ, ಪ್ರಧಾನ ಕಾರ್ಯದರ್ಶಿ ಮೇಘಮೋಹನ್ ಶೆಟ್ಟಿ, ಪುಷ್ಪ ವಿಶ್ವನಾಥ್, ಬಸವರಾಜ್, ಪ್ರದೀಪ್, ಮಂಜುನಾಥ್, ವಿಜಯಲಕ್ಷ್ಮಿ, ಸುರೇಖಾ, ಸಂದ್ಯಾ, ಗೌರಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.