ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಕೊರೊನಾ ಆತಂಕದ ಮಧ್ಯೆ ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಪ್ರತಿ ಕೇಂದ್ರಗಳಲ್ಲೂ ವಿದ್ಯಾರ್ಥಿಗಳ ಮಾಹಿತಿ ಪಡೆಯಲು ವಿಶೇಷ ಸಿಬ್ಬಂದಿ ನೇಮಕ
Last Updated 24 ಜೂನ್ 2020, 13:44 IST
ಅಕ್ಷರ ಗಾತ್ರ

ಶಿವಮೊಗ್ಗ: ಎಸ್ಸೆಸ್ಸೆಲ್ಸಿಪರೀಕ್ಷೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳೂಪೂರ್ಣಗೊಂಡಿದ್ದು,ಜಿಲ್ಲೆಯ84 ಪರೀಕ್ಷಾಕೇಂದ್ರಗಳಲ್ಲೂ ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆಯುವ ವಾತಾವರಣ ಕಲ್ಪಿಸಲಾಗಿದೆ.

ಪರೀಕ್ಷೆ ನಡೆಯುವ ಶಾಲೆಗಳು ಪರೀಕ್ಷೆ ಬರೆಯುವ1,252 ಕೊಠಡಿಗಳನ್ನು ಸ್ಯಾನಿಟೈಜೇಷನ್ ಮಾಡಲಾಗಿದೆ. ನೋಡಲ್ ಅಧಿಕಾರಿಗಳು ಎಲ್ಲ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ದುರ್ಗಿಗುಡಿಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು,ಪೋಷಕರು, ಶಾಲೆಯ ಎಲ್ಲ ಅಧ್ಯಾಪಕರಿಗೆಬುಧವಾರ ಅಂತರ ಕಾಯ್ದುಕೊಳ್ಳುವ ಪ್ರಾತ್ಯಕ್ಷಿಕೆ ನೀಡಲಾಯಿತು. ಶಾಲೆಯ ಪ್ರವೇಶ ದ್ವಾರದಲ್ಲೇಥರ್ಮಲ್‌ ಸ್ಕ್ರಿನಿಂಗ್ಮಾಡಲಾಯಿತು.

ಜೂನ್‌ 25ರಿಂದ ಏಪ್ರಿಲ್‌ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ.ಪ್ರತಿ ಕೇಂದ್ರಗಳಲ್ಲೂ ವಿದ್ಯಾರ್ಥಿಗಳ ಮಾಹಿತಿ ಪಡೆಯಲುವಿಶೇಷ ಸಿಬ್ಬಂದಿ ನೇಮಕ ಮಾಡಲಾಗಿದೆ. ಬೆಳಿಗ್ಗೆ 8.30ರ ಒಳಗೆ ವಿದ್ಯಾರ್ಥಿಗಳುಉಪಹಾರಸೇವಿಸಿ,ಪರೀಕ್ಷಾ ಕೇಂದ್ರದ ಒಳಗೆ ಬರುವಂತೆ ಸೂಚಿಸಲಾಗಿದೆ. ಮಾಹಿತಿ ನೀಡಲು ಧ್ವನಿವರ್ಧಕ ವ್ಯವಸ್ಥೆ ಮಾಡಲಾಗಿದೆ.ಕೊಠಡಿಗಳ ಮುಂದೆಸಾಮಾಜಿಕ ಅಂತರ ಕಾಯ್ದುಕೊಳ್ಳಲು ಚೌಕಗಳನ್ನು ಬರೆಯಲಾಗಿದೆ.

ಜಿಲ್ಲೆಯ ಏಳೂ ತಾಲ್ಲೂಕುಗಳ24,904 ವಿದ್ಯಾರ್ಥಿಗಳು, ಎರಡುಕೇಂದ್ರಗಳಲ್ಲಿ 610 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.84 ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಕೊಠಡಿಗೆ ಗರಿಷ್ಠ 20 ವಿದ್ಯಾರ್ಥಿಗಳಿಗೆಅವಕಾಶ ಕಲ್ಪಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ಕರೆತರಲು 142 ಖಾಸಗಿ ಬಸ್, 56 ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ನಿತ್ಯವೂ ನಿಗದಿತ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ, ಉಚಿತವಾಗಿ ಪ್ರಯಾಣಿಸುವ ಅವಕಾಶಕಲ್ಪಿಸಲಾಗಿದೆ. ಪರೀಕ್ಷಾ ಸಮಯದಲ್ಲಿಹಾಸ್ಟೆಲ್ ಸೌಲಭ್ಯ ಬಯಸಿದ 773 ವಿದ್ಯಾರ್ಥಿಗಳಿಗೆ 62 ಹಾಸ್ಟೆಲ್‍ಗಳ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯ 3745 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕಾಲ್ನಡಿಗೆಯಲ್ಲಿ, 10,940 ಮಕ್ಕಳು ಪೋಷಕರ ಜತೆ, 548 ಮಕ್ಕಳು ಶಾಲಾ ವಾಹನದಲ್ಲಿ, 752 ಮಕ್ಕಳು ರೂಟ್ ಬಸ್‌ನಲ್ಲಿ ಬರುವರು. ಸೌಲಭ್ಯವಿಲ್ಲದ 4,097 ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದು, ಸುರಕ್ಷಿತವಾಗಿ ಮನೆಗೆ ತಲುಪಿಸಲು 189 ಶಾಲೆಗಳ 252 ವಾಹನಗಳು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ 104 ಬಸ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. 5 ಬಸ್‌ಗಳನ್ನು ತುರ್ತು ಸೇವೆಗೆ ಮೀಸಲಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT