ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಸುರಕ್ಷತೆ ಮಧ್ಯೆ ಸುಗಮ ಪರೀಕ್ಷೆ

ಅದೃಷ್ಟ ಪರೀಕ್ಷೆಯಲ್ಲಿ ಯಶ ಕಂಡ ಜಿಲ್ಲೆಯ 24,224 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Last Updated 25 ಜೂನ್ 2020, 12:33 IST
ಅಕ್ಷರ ಗಾತ್ರ

ಶಿವಮೊಗ್ಗ: ಆರೋಗ್ಯ ಭದ್ರತೆಯ ಸುರಕ್ಷತೆಯ ಮಧ್ಯೆಜಿಲ್ಲೆಯ 84 ಪರೀಕ್ಷಾ ಕೇಂದ್ರಗಳಲ್ಲೂಗುರುವಾರಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿನೆರವೇರಿತು.

ಮಾರ್ಚ್–ಏಪ್ರಿಲ್‌ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಕೊರೊನಾ ಕಾರಣಕ್ಕೆ ಮುಂದೂಲ್ಪಟ್ಟಿತ್ತು. ಆನಂತರ ಪರೀಕ್ಷೆ ನಡೆಸುವಕುರಿತುಪರ, ವಿರೋಧದ ವ್ಯಕ್ತವಾಗಿತ್ತು. ಕೊರೊನಾ ಮಧ್ಯೆಯೂ ಪರೀಕ್ಷೆ ನಡೆಯುತ್ತಿರುವ ಕಾರಣಶಿಕ್ಷಣ ಇಲಾಖೆ ಮಕ್ಕಳ ಆರೋಗ್ಯ ದೃಷ್ಟಿಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂಸೂಕ್ತ ಮುಂಜಾಗ್ರತೆ ಕೈಗೊಳ್ಳಲಾಗಿತ್ತು.

ಅಂತರ ಕಾಯ್ದುಕೊಳ್ಳಲು ಶಾಲೆಯ ಮುಂದೆ ಹಾಕಿದ್ದ ಬ್ಯಾರಿಕೇಡ್‌, ಚೌಕಾಕಾರದ ಮಾರ್ಕ್‌ಗಳಲ್ಲಿವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬೆಳಿಗ್ಗೆ 8ರಿಂದಲೇ ಬಂದು ತಪಾಸಣೆಗೆ ಒಳಗಾದರು. ನಂತರಪರೀಕ್ಷಾ ಕೊಠಡಿಗಳಿಗೆ ತೆರಳಿದರು. ನಗರದ ದುರ್ಗಿಗುಡಿ, ಪ್ರಿಯದರ್ಶನಿ ಸೇರಿದಂತೆ ಕೆಲವು ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌, ಸಾ‌ರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಎನ್‌. ಎಂ.ರಮೇಶ್‌ ಭೇಟಿ ನೀಡಿ, ಪರಿಶೀಲಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೇಂದ್ರಗಳಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್‌ ಮಕ್ಕಳಿಗೆ ಸ್ಯಾನಿಟೈಜರ್‌, ಮಾಸ್ಕ್‌ ವಿತರಿಸಿದರು. ನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್‌.ಸಿ.ಯೋಗೀಶ್‌ ವಿದ್ಯಾರ್ಥಿಗಳಿಗೆ ಕುಡಿಯಲು ನೀರಿನ ಬಾಟಲ್‌ ವ್ಯವಸ್ಥೆ ಮಾಡಿದ್ದರು. ಕೇಂದ್ರಗಳಿಗೆ ಬರಲು ಅಗತ್ಯ ಇರುವ ಕಡೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿತ್ತು. ಸ್ವಯಂ ಸೇವಕರು, ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ ಸಿಬ್ಬಂದಿಸಹಕಾರದೊಂದಿಗೆ ಮೊದಲ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.

ಸೀಲ್‌ಡೌನ್‌ ಪ್ರದೇಶದಿಂದ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ವಹಿಸಲಾಗಿತ್ತು. ಅವರಿಗೆ ಪ್ರತೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.ಯಾವುದೇ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.

ಪೋಷಕರಿಗೆ ಆತಂಕ

ಪರೀಕ್ಷೆ ಎದುರಿಸುತ್ತಿರುವ ಮಕ್ಕಳ ಪೋಷಕರು ಆಂತಕದಲ್ಲಿದ್ದರು. ಪರೀಕ್ಷಾ ಕೇಂದ್ರ ಸುತ್ತ ಪೊಲೀಸ್‌ ಬಿಗಿ ಬಂದುಬಸ್ತ್‌ ಮಾಡಲಾಗಿತ್ತು.ಪರೀಕ್ಷೆ ಆರಂಭದ ವೇಳೆಗೆ ಪೋಷಕರನ್ನು ಹೊರಗೆ ಕಳಿಸಲು ಪೊಲೀಸರು ಹರಸಾಹಸ ಪಟ್ಟರು. ಕೆಲ ಪೋಷಕರು ಪರೀಕ್ಷೆ ಮುಗಿಯುವರೆಗೆ ಕೇಂದ್ರದ ಸಮೀಪದಲ್ಲೇ ಕಾದು ಕುಳಿತ್ತಿದ್ದರು.

ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭಕೋರಿದ ಸಂಸದ ಬಿ.ವೈ.ರಾಘವೇಂದ್ರ ಅವರು ಎಸ್ಎಸ್ಎಲ್‌ಸಿ ಪರೀಕ್ಷೆ ಪ್ರತಿ ವಿದ್ಯಾರ್ಥಿಯ ಜೀವನದ ಪ್ರಮುಖ ಘಟ್ಟವಾಗಿದೆ. ಕೊರೋನ ಸೋಂಕಿನ ಕಾರಣಕ್ಕಾಗಿ ಪೋಷಕರು ಹಾಗೂ ಮಕ್ಕಳು ಆತಂಕಪಡುವ ಅಗತ್ಯವಿಲ್ಲ. ಪರೀಕ್ಷಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸುವಂತೆ ಹಾಗೂ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗುವಂತೆ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT