ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 31ರಿಂದ ಏಪ್ರಿಲ್ 15 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಹೇಳಿದರು.

ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು.

94 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, 94 ಮುಖ್ಯ ಅಧೀಕ್ಷಕರು, 31 ಅನ್ಯ ಇಲಾಖೆ ಅಧಿಕಾರಿಗಳನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 33 ಮಾರ್ಗಗಳನ್ನು ರಚಿಸಲಾಗಿದೆ. 33 ಜನ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ 350 ಕ್ಕೂ ಹೆಚ್ಚು ಇರುವ ಕಡೆ ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 11 ಉಪ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.

ಕೆಲವು ಹಳ್ಳಿಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಅಥವಾ ಬಸ್ ನಿಲುಗಡೆ ಇರುವುದಿಲ್ಲ. ಇಂತಹ ಸಮಸ್ಯೆಯನ್ನು ತಾಲ್ಲೂಕಿನ ಬಿಇಒಗಳು ಪರಿಶೀಲಿಸಿ ಕೂಡಲೇ ವರದಿ ನೀಡಬೇಕು. ಅಂತಹ ಕಡೆ
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‍ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಫೋನ್ ಮೊದಲಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಮುತುವರ್ಜಿಯಿಂದ ಕರ್ತವ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಿರಬೇಕಾದ ಸಮಯ ಮತ್ತಿತರ ಸೂಚನೆ ನೀಡಬೇಕು ಎಂದರು.

ಯಾವುದೇ ರೀತಿಯ ಅಡಚಣೆ, ಅವ್ಯವಸ್ಥೆ ಆಗದಂತೆ ವ್ಯವಸ್ಥಿತವಾಗಿ ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಂಡು, ಪರೀಕ್ಷೆ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸಮರ್ಪಕ ಆಸನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳ ಕುರಿತು ಸಂಬಂಧಿಸಿದ ಬಿಇಒಗಳು ಪರಿಶೀಲಿಸಿ ವರದಿ ನೀಡಿರುತ್ತಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಬೇಕು. ಸಿಸಿ ಟಿವಿ ಇಲ್ಲದ ಕಡೆ ಅದಕ್ಕೆ ವ್ಯವಸ್ಥೆ ಮಾಡಬೇಕು ಎಂದು ಡಿಡಿಪಿಐ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಡಯಟ್ ಪ್ರಾಂಶುಪಾಲ ಬಸವರಾಜಪ್ಪ, ಖಜಾನೆ ಉಪ ನಿರ್ದೇಶಕಿ ಸಾವಿತ್ರಿ ಇದ್ದರು.

ಜಿಲ್ಲೆಯಲ್ಲಿ 94 ಪರೀಕ್ಷಾ ಕೇಂದ್ರ

ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ ಎರಡು ಖಾಸಗಿ ಪರೀಕ್ಷಾ ಕೇಂದ್ರಗಳು ಸೇರಿವೆ. ಒಟ್ಟು 23,372 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 22,068 ರೆಗ್ಯುಲರ್ ವಿದ್ಯಾರ್ಥಿಗಳು, 814 ಪುನರಾವರ್ತಿತ, 357 ಖಾಸಗಿಯಾಗಿ ನೊಂದಾಯಿತ, 133 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.