ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ: ತೀರ್ಥಹಳ್ಳಿ ಪ್ರಥಮ

Published : 9 ಮೇ 2023, 16:21 IST
Last Updated : 9 ಮೇ 2023, 16:21 IST
ಫಾಲೋ ಮಾಡಿ
Comments

ತೀರ್ಥಹಳ್ಳಿ: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ ತೀರ್ಥಹಳ್ಳಿ ತಾಲ್ಲೂಕು (ಶೇ 91.08) ಪ್ರಥಮ ಸ್ಥಾನ ಪಡೆದುಕೊಂಡಿದೆ. 12 ಶಾಲೆಗಳಿಗೆ ಶೇಕಡಾ 100ರಷ್ಟು ಫಲಿತಾಂಶ ಬಂದಿದೆ. ಅದರಲ್ಲಿ ಸರ್ಕಾರಿ ಶಾಲೆಗಳು 7, ಅನುದಾನಿತ 1, ಅನುದಾನರಹಿತ ಶಾಲೆ 4 ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿರಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟ್ಟು 1625 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 1480 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 38 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ. ಕನ್ನಡ ಮಾದ್ಯಮದಲ್ಲಿ ಸರ್ಕಾರಿ ಪ್ರೌಢಶಾಲೆ ಗುಡ್ಡೇಕೇರಿಯ ಶ್ರೀರಾಮ್‌ ಭಟ್‌ 611 ಅಂಕ ಪಡೆದು ಪ್ರಥಮ, ಬಿಳಲುಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿಂಚನ ಎಂ 606 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳಾದ ಬಿಳಲುಕೊಪ್ಪ, ಹುಂಚದಕಟ್ಟೆ, ಕೊಂಡ್ಲೂರು, ತನಿಕಲ್, ಮಂಡಗದ್ದೆ, ಬಾವಿಕೈಸರು, ರಾಮಕೃಷ್ಣಾಪುರ, ಆಗುಂಬೆ, ಸಹ್ಯಾದ್ರಿ, ಸೆಂಟ್‌ ಮೇರಿಸ್‌, ವಿಶ್ವತೀರ್ಥ, ವಾಗ್ದೇವಿ ಶಾಲೆ ಶೇಕಡಾ 100ರಷ್ಟು ಫಲಿತಾಂಶ ಪಡೆದಿವೆ ಎಂದು ತಿಳಿಸಿದ್ದಾರೆ.

undefined undefined

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT