ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಿನಕಾರು: ಸರ್ಕಾರಿ ಶಾಲೆಗೆ 5ನೇ ಬಾರಿಗೆ ಶೇ 100 ಫಲಿತಾಂಶ

Published 12 ಮೇ 2024, 16:17 IST
Last Updated 12 ಮೇ 2024, 16:17 IST
ಅಕ್ಷರ ಗಾತ್ರ

ತುಮರಿ: ಸಮೀಪದ ಕಟ್ಟಿನಕಾರು ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ 5ನೇ ಬಾರಿಯೂ ಶೇ 100 ಫಲಿತಾಂಶ ಪಡೆದು ಸಾಧನೆ ಮಾಡಿದೆ.

ಪರೀಕ್ಷೆಗೆ ಹಾಜರಾಗಿದ್ದ 20 ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದಾರೆ. 5 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 12 ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ ಶ್ರೇಣಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ದೀಪಿಕಾ ಶೇ 93, ದೀಪ್ತಿ 92, ಚಂದನಾ ಶೇ 90 ಫಲಿತಾಂಶ ಪಡೆದಿದ್ದಾರೆ.

ಗ್ರಾಮೀಣ ಭಾಗದ ಹಿಂದುಳಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಉತ್ತಮ ಫಲಿತಾಂಶಕ್ಕೆ ಕಾರಣರಾದ ಮುಖ್ಯಶಿಕ್ಷಕ ಬಸವರಾಜಪ್ಪ ಬಿ., ಸಹ ಶಿಕ್ಷಕರಾದ ಹರಿಪ್ರಸಾದ್ ಎಂ.ಜಿ., ಹರೀಶ್, ಮಧುಕೇಶ್ವರ ಹೆಗಡೆ, ಶಾಲಾಭಿವೃದ್ಧಿ ಸಮಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಇ., ಸಮನ್ವಯಾಧಿಕಾರಿ ಅನ್ನಪೂರ್ಣ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT