ಶುಕ್ರವಾರ, ಆಗಸ್ಟ್ 12, 2022
27 °C

ಮರು ಮೌಲ್ಯಮಾಪನ: ರಾಜ್ಯಕ್ಕೆ ದ್ವಿತೀಯ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದ ಮರು ಮೌಲ್ಯಮಾಪನದ ಬಳಿಕ ಶಿವಮೊಗ್ಗದ ಪ್ರಿಯದರ್ಶಿನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆರ್. ಕಾವ್ಯ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. 

ಕಾವ್ಯ ಮೊದಲಿನ ಫಲಿತಾಂಶದಲ್ಲಿ 625ಕ್ಕೆ 620 ಅಂಕ ಗಳಿಸಿದ್ದರು. ಹಿಂದಿ ಹಾಗೂ ವಿಜ್ಞಾನ ವಿಷಯದಲ್ಲಿ ನಿರೀಕ್ಷೆಯಷ್ಟು ಅಂಕ ಬಾರದ ಕಾರಣ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಮರು ಮೌಲ್ಯಮಾಪನದ ಫಲಿತಾಂಶ ಬಂದಿದ್ದು, 625ಕ್ಕೆ 624 ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಶಾಲೆಯ ಕಾರ್ಯದರ್ಶಿಗಳು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು