ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಟ್ಯಾನ್‌ಫೋರ್ಡ್ ವಿಜ್ಞಾನಿಗಳ ಪಟ್ಟಿ: ಕುವೆಂಪು ವಿ.ವಿಯ ಇಬ್ಬರಿಗೆ ಸ್ಥಾನ

Published 5 ಅಕ್ಟೋಬರ್ 2023, 15:33 IST
Last Updated 5 ಅಕ್ಟೋಬರ್ 2023, 15:33 IST
ಅಕ್ಷರ ಗಾತ್ರ

ಭದ್ರಾವತಿ: ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಶೇ. 2ರಷ್ಟು ಅತ್ಯುತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಬಿ.ಜೆ.ಗಿರೀಶ್ ಮತ್ತು ಬಿ.ಇ.ಕುಮಾರಸ್ವಾಮಿ ಸತತ ಮೂರನೇ ವರ್ಷ ಸ್ಥಾನ ಪಡೆದಿದ್ದಾರೆ.

ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜಾನ್ ಅಯೋನ್ನಿಡಿಸ್ ಅಕ್ಟೋಬರ್ 4ರಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಇವರು ಸ್ಥಾನ ಪಡೆದಿದ್ದು, ಇಬ್ಬರ ವಿವರ ಅಂತರ್ಜಾಲದಲ್ಲಿ ಲಭ್ಯವಿದೆ.  

ಅಂತರರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹ ಲೇಖನಗಳು, ಎಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಗತ್ತಿನ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶ ಪ್ರಕಟಿಸಲಾಗುತ್ತದೆ. ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡುವ ಸಂಪ್ರದಾಯ ಶುರುವಾಗಿದ್ದು 2018ರಲ್ಲಿ. 

ಸಾಧಕರ ಪಟ್ಟಿಯಲ್ಲಿ 40,686ನೇ ಸ್ಥಾನ ಪಡೆದಿರುವ ವಿಶ್ವವಿದ್ಯಾಲಯದ ಗಣಿತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಬಿ.ಜೆ. ಗಿರೀಶ್ ಎಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಷಯಗಳ ಕುರಿತು ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. 

ಔದ್ಯೋಗಿಕ ರಸಾಯನ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಬಿ.ಇ. ಕುಮಾರಸ್ವಾಮಿ 1,79,264ನೇ ಸ್ಥಾನದಲ್ಲಿದ್ದು, ಸತತ ಮೂರನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ ಎಂದು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಎಸ್.ವೆಂಕಟೇಶ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT