ಭಾನುವಾರ, ಸೆಪ್ಟೆಂಬರ್ 19, 2021
30 °C

‘ಖಾತ್ರಿ ಯೋಜನೆಯಲ್ಲಿ ರಾಜ್ಯ ಮುಂದು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನಂದಪುರ: ‘ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಸ್ವಚ್ಛ ಭಾರತ್ ಹಾಗೂ ನರೇಗಾವನ್ನು ಯಶಸ್ವಿಯಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾಗಿದ್ದು, ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದ್ದೇವೆ. ಇದನ್ನು ಮುಂದುವರಿ ಸಿಕೊಂಡು ಹೋಗಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸಮೀಪದ ಹೊಸೂರು ಗ್ರಾಮ ಪಂಚಾಯಿತಿಯ ಕೆದಲೂರು ಸೇತುವೆ ಹಾಗೂ ಬ್ಯಾಡರಕೊಪ್ಪದ ಬೆಳೆಹಾನಿ ಪ್ರದೇಶಗಳನ್ನು ಪರಿಶೀಲಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಿಗೆ ನ್ಯಾಯ ಕೊಡಿಸಲು ಮೊದಲಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆಯನ್ನು ಮುಂದುವರಿಸಿರುವುದು ಹೆಚ್ಚು ಸಂತೋಷವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಗಬೇಕಾದ ಕಾಮಗಾರಿಗಳ ಬಗ್ಗೆ ಮಾಹಿತಿ ಇದೆ. ಅಗತ್ಯವಾದ ಚರಂಡಿ, ನೀರು, ರಸ್ತೆ ಮುಂತಾದ ಮೂಲಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಳೆಯಿಂದಾಗಿ ₹ 418 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇನ್ನೂ ಹಲವೆಡೆ ಹಾನಿ ಆಗಿರುವ ವರದಿ ಬರಬೇಕಾಗಿದೆ. ಸಾಗರ ತಾಲ್ಲೂಕಿನಲ್ಲಿಯೂ ದೊಡ್ಡ ಪ್ರಮಾಣದ ಹಾನಿಯಾಗಿದೆ ಎಂದರು.

ಜಿಲ್ಲೆಯಲ್ಲಿ ಕೊರೊನಾ ವಿಚಾರವಾಗಿ ಹೆದರಿಕೊಳ್ಳುವ ಸ್ಥಿತಿ ತಲುಪಿಲ್ಲ. ಈಗಾಗಲೇ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕರ ಹಾಗೂ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಶಾಸಕರಾದ ಎಚ್.ಹಾಲಪ್ಪ ಹರತಾಳು, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಕಮ್ಮಾರ್, ಉಪತಹಶೀಲ್ದಾರ್ ಕಲ್ಲಪ್ಪ ಮೆಣಸಿನ ಹಾಳ್ , ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಎಪಿಎಂಸಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು, ಯಡೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣಪತಿ, ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶರತ್ ನಾಗಪ್ಪ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಾಂತಕುಮಾರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.