ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಾಣಿವಿಲಾಸ ಸಾಗರಕ್ಕೆ ಭದ್ರಾ ನೀರು ಹರಿಸುವುದನ್ನು ನಿಲ್ಲಿಸಿ’

Last Updated 11 ಜುಲೈ 2021, 4:14 IST
ಅಕ್ಷರ ಗಾತ್ರ

ಶಿವಮೊಗ್ಗ: ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.

ಭದ್ರಾ ಜಲಾಶಯದಲ್ಲಿ ಈ ಬಾರಿ ಕಡಿಮೆ ನೀರು ಸಂಗ್ರಹವಾಗಿದೆ. ಪ್ರಸ್ತುತ 155.10 ಅಡಿ ನೀರಿದೆ. ಡೆಡ್ ಸ್ಟೋರೇಜ್, ಬೇಸಿಗೆಗೆ ಕುಡಿಯುವ ನೀರು ಇವೆಲ್ಲವೂ ಸೇರಿದರೆ ಕೇವಲ 28 ದಿನಗಳಿಗಾಗುವಷ್ಟು ಮಾತ್ರ ಇದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವುದು ಸೂಕ್ತವಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತುಂಗಾ ನದಿಯಲ್ಲಿ ಸಾಕಷ್ಟು ನೀರಿನ ಸಂಗ್ರಹವಿದೆ. ಅಲ್ಲದೇ ಯಥೇಚ್ಛವಾಗಿ ಹರಿದು ಹೋಗುತ್ತಿದೆ. ಇಲ್ಲಿಂದ ನೀರೆತ್ತುವ ಯೋಜನೆ ವಿಳಂಬವಾಗುತ್ತಿದ್ದು, ಅದನ್ನು ಪೂರ್ಣಗೊಳಿಸಬೇಕು. ಆಗ ಭದ್ರಾ ಜಲಾಶಯದಿಂದ ನೀರು ಹರಿಸುವ ಬಗ್ಗೆ ಯೋಚಿಸಬಹುದು. ಭದ್ರಾ ಜಲಾಶಯ ತುಂಬದ ಹೊರತು ವಾಣಿವಿಲಾಸಕ್ಕೆ ನೀರು ನೀಡಬಾರದು. ಇಷ್ಟಾಗಿಯೂ ನೀರಾವರಿ ಸಲಹಾ ಸಮಿತಿ ಸಭೆ ಸೇರದೇ ನೀರು ಹರಿಸಲು ಮುಂದಾದರೆ, ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅತ್ತಿಗುಂದ ಆರ್. ಶ್ರೀನಿವಾಸ್, ಕೆ. ದೇವೇಂದ್ರಪ್ಪ, ಜಿ.ಎಂ. ಚನ್ನಬಸಪ್ಪ, ಎಸ್. ಶಿವಮೂರ್ತಿ, ಕೆ. ರಾಘವೇಂದ್ರ, ಎಚ್.ಎಂ. ಚಂದ್ರಪ್ಪ, ಮಲ್ಲಿಕಾರ್ಜುನ, ದೇವೇಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT