ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸನಗರ: ಸೂಕ್ತ ಜಾಗಕ್ಕೆ ಬೀದಿ ಬದಿ ವ್ಯಾಪಾರಿಗಳ ಮನವಿ

ಶಾಸಕರ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಬೇಳೂರು
Published 24 ಅಕ್ಟೋಬರ್ 2023, 14:20 IST
Last Updated 24 ಅಕ್ಟೋಬರ್ 2023, 14:20 IST
ಅಕ್ಷರ ಗಾತ್ರ

ಹೊಸನಗರ: ಸೂಕ್ತ ಜಾಗವಿಲ್ಲದೇ ವ್ಯಾಪಾರ ನಡೆಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಜಾಗ ಗುರುತಿಸಿಕೊಡಿ ಎಂದು ಬೀದಿ ಬದಿ ವ್ಯಾಪಾರಿಗಳು ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.

ಹೆದ್ದಾರಿ ಬದಿಯಲ್ಲಿ ವ್ಯಾಪಾರ ವಹಿವಾಟು ನಡೆಸಿಕೊಂಡು ಬದುಕು ಕಟ್ಟಿಕೊಂಡಿದ್ದೇವೆ. ಆದರೆ ಹೆದ್ದಾರಿ ಬದಿಯಲ್ಲಿದ್ದ ನಮ್ಮ ಅಂಗಡಿಗಳನ್ನು ತೆರವುಗೊಳಿಸಿದ್ದು, ಬದುಕು ಬೀದಿಗೆ ಬಂದಿದೆ. ಕೂಡಲೇ ಸೂಕ್ತ ಜಾಗ ಗುರುತಿಸಿಕೊಡಿ ಎಂದು ವ್ಯಾಪಾರಿಗಳು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಶಾಸಕರು, ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡಿ ಶೀಘ್ರವೇ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ವ್ಯಾಪಾರಿಗಳಾದ ಚಂದ್ರಶೇಖರ್, ಗಣಪತಿ, ಲಕ್ಷ್ಮಣ್, ಶಾಲಿನಿ, ಅವಿನಾಶ್, ಗೋವಿಂದಣ್ಣ ಇತರರು ಉಪಸ್ಥಿತರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT