ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ: ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ

Last Updated 23 ಅಕ್ಟೋಬರ್ 2021, 6:45 IST
ಅಕ್ಷರ ಗಾತ್ರ

ಸಾಗರ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

‘ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವು ವರ್ಷಗಳಿಂದ ಶಿಕ್ಷಕರು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರೂ ಸರ್ಕಾರ ಗಮನಹರಿಸದೇ ಇರುವುದು ಬೇಸರದ ಸಂಗತಿ. ಮೂರು ತಿಂಗಳ ಹಿಂದೆ ಸಂಘವು ಸರ್ಕಾರಕ್ಕೆ ಗಡುವು ನೀಡಿ ಬೇಡಿಕೆ ಈಡೇರಿಸಲು ಮನವಿ ಮಾಡಿತ್ತು. ಈವರೆಗೆ ಸರ್ಕಾರ ಶಿಕ್ಷಕರ ಬೇಡಿಕೆ ಈಡೇರಿಸದ ಕಾರಣ ಇರುವ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯ’ ಎಂದು ಸಂಘದ ಅಧ್ಯಕ್ಷ ಡಿ. ಗಣಪತಪ್ಪ ಹೇಳಿದರು.

‘ಅ.4ರಿಂದ ಶಿಕ್ಷಕರು ಇಲಾಖೆಯಿಂದ ನೀಡುವ ಎಲ್ಲ ತರಬೇತಿಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅ. 29ರ ವರೆಗೆ ಮಕ್ಕಳ ಜೊತೆ ಬೆರೆಯುತ್ತಾ, ಶೈಕ್ಷಣಿಕ ಚಟುವಟಿಕೆ ನಡೆಸುವುದರ ಜೊತೆಗೆ ಕಪ್ಪುಪಟ್ಟಿ ಧರಿಸಿ ಸರ್ಕಾರದ ಗಮನ ಸೆಳೆಯಲಾಗುತ್ತಿದೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದೇ ಹೋದಲ್ಲಿ ಅ.30ರಿಂದ ನ.10ರ ವರೆಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ನಿರ್ವಹಿಸದೇ ಅಸಹಕಾರ ಹೋರಾಟ ನಡೆಸಲಾಗುವುದು’ ಎಂದರು.

ನ.11ರಿಂದ ನ.18ರ ವರೆಗೆ ಯಾವುದೇ ಮಾಹಿತಿಯನ್ನು ನೀಡದೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಅಂತಿಮವಾಗಿ ಶಿಕ್ಷಕರ ಸಂಘದ ಎಲ್ಲ ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು, ನಿರ್ದೇಶಕರು ರಾಜ್ಯಮಟ್ಟದಲ್ಲಿ ರ‍್ಯಾಲಿ, ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ. ಸರ್ಕಾರ ತಕ್ಷಣ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಮೂರ್ತಿ ಎಂ.ವೈ., ಪ್ರಮುಖರಾದ ಶಾರದಾ ಎ.ಎಸ್., ಶೈಲಜಾ, ಮಂಜುಳಾ, ವಿಜಯಕುಮಾರಿ, ಎಂ.ಪಿ. ಸತ್ಯನಾರಾಯಣ, ಹಾಲಸ್ವಾಮಿ, ಜಗನ್ನಾಥ್ ಕೆ., ಮಾಲತೇಶ್, ಪುರುಷೋತ್ತಮ್, ವಿ.ಟಿ. ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT