ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲೇಜು ಆಹಾರ ಮೇಳದಲ್ಲಿ ಮಾಂಸಾಹಾರ: ಸ್ಪ‍ರ್ಧಿಸಲು ವಿದ್ಯಾರ್ಥಿಗೆ ಅವಕಾಶ ನಿರಾಕರಣೆ

Published 7 ಆಗಸ್ಟ್ 2023, 15:56 IST
Last Updated 7 ಆಗಸ್ಟ್ 2023, 15:56 IST
ಅಕ್ಷರ ಗಾತ್ರ

ಸಾಗರ: ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ.

ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ ಹೇರಿದ್ದಾರೆ. ಇದು ವಾಗ್ವಾದಕ್ಕೆ ದಾರಿಯಾಗಿದೆ.

‘ಆಹಾರ ಮೇಳದ ನಿಯಮಗಳ ಬಗ್ಗೆ ಮೊದಲೇ ಸೂಚಿಸಲಾಗಿತ್ತು. ಆದರೂ ಮಾಂಸಾಹಾರ ತಂದಿರುವುದು ನಿಯಮದ ಉಲ್ಲಂಘನೆ’ ಎಂದು ಉಪನ್ಯಾಸಕರು ಹೇಳಿದ್ದಾರೆ.

ಆಗ ವಿದ್ಯಾರ್ಥಿನಿಯರು ‘ಆಹಾರ ಮೇಳದಲ್ಲಿ ಮಾಂಸಹಾರಕ್ಕೆ ನಿರ್ಬಂಧ ಹೇರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದಾಗ ‘ನಾವು ಹೇಳಿದ್ದನ್ನು ಕೇಳಬೇಕು’ ಎಂದು ಉಪನ್ಯಾಸಕರು ತಾಕೀತು ಮಾಡಿದ್ದಾರೆ.

ನಂತರ ಆಹಾರ ಮೇಳದಲ್ಲಿ ಮಾಂಸಹಾರಕ್ಕೆ ಅವಕಾಶ ನೀಡಲಾಯಿತು. ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರ ನಡುವೆ ನಡೆದ ವಾಗ್ವಾದದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT