ಶುಕ್ರವಾರ, ಮೇ 14, 2021
25 °C

ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳೆಹೊನ್ನೂರು: ಪಟ್ಟಣ ಸಮೀಪದ ಹೊಳೆಭೈರನಹಳ್ಳಿ ಗ್ರಾಮದಲ್ಲಿ ಸೋಮವಾರ 9ನೇ ತರಗತಿ ವಿದ್ಯಾರ್ಥಿ ಭದ್ರಾನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದಾನೆ.

ಅರುಣ (14) ನಾಪತ್ತೆಯಾದ ವಿದ್ಯಾರ್ಥಿ.  ಈಜಲು ಹೋಗಿದ್ದಾಗ ಬಾಲಕ ಮುಳುಗಿದ್ದಾನೆ. ನದಿ ಪಾತ್ರದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯರು ಮುಳುಗುತ್ತಿರುವುದನ್ನು ಕಂಡು ನೀರಿನಲ್ಲಿ ಸೀರೆ ಬಿಟ್ಟು ಕಾಪಾಡಲು ಪ್ರಯತ್ನಿಸಿದ್ದಾರೆ. ವ್ಯಕ್ತಿಯೊಬ್ಬರು ನದಿಗೆ ಹಾರಿ ಕಾಪಾಡಲು ಪ್ರಯತ್ನಿಸಿದರೂ ಬಾಲಕ ಸಿಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಗ್ನಿ ಶಾಮಕದಳದ ಸಿಬ್ಬಂದಿ ಬಾಲಕನ ಪತ್ತೆ ಕಾರ್ಯ ನಡೆಸಿದರು. ರಾತ್ರಿಯಾದ ಕಾರಣ ಕಾರ್ಯಾಚರಣೆ ನಾಳೆ ಮುಂದುರಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪಿಎಸ್‍ಐ ಎಸ್. ಸುರೇಶ್ ಭೇಟಿ ನೀಡಿ ಪರಿಶೀಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು