ಶನಿವಾರ, ಅಕ್ಟೋಬರ್ 16, 2021
23 °C

ಆಂಬುಲೆನ್ಸ್‌ನಲ್ಲೇ ಯಶಸ್ವಿ ಹೆರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನವಟ್ಟಿ: ಸಮೀಪದ ಬೆಟ್ಟದಕೂರ್ಲಿ ಗ್ರಾಮದ ರೇಖಾ ನಾಗರಾಜ ಅವರಿಗೆ ಸೋಮವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಂಬುಲೆನ್ಸ್‌ನಲ್ಲೇ ಹೆರಿಗೆಯಾಗಿದೆ.

ರೇಖಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಗ ಶುಶ್ರೂಷಕ ಮಾಲತೇಶ್ ಅವರು ತಕ್ಷಣ ವಾಹನವನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ, ಆಶಾ ಕಾರ್ಯಕರ್ತೆ ಶಶಿಕಲಾ ಹಾಗೂ ಚಾಲಕ ಪರಮೇಶಪ್ಪ ಅವರ ಸಹಾಯ ಪಡೆದು ಯಶಸ್ವಿ ಹೆರಿಗೆ ಮಾಡಿಸಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದು, ಆನವಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.