ಶಿವಮೊಗ್ಗ: ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣ ಆದೇಶವನ್ನು ಪುನರ್ ಪರಿಶೀಲಿಸುವಂತೆ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಡಿ.ಆರ್. ಗಿರೀಶ್, ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನ ಮಾನದಂಡಗಳನ್ನು ಉಲ್ಲಂಘಿಸಿ, ಅವೈಜ್ಞಾನಿಕವಾಗಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಮಾಡಿದೆ. ಇದರಿಂದ ಭೋವಿ, ಲಂಬಾಣಿ, ಕೊರಮ–ಕೊರಚ ಹಾಗೂ ಅಲೆಮಾರಿ ಬುಡಕಟ್ಟು ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಒಳಮೀಸಲಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು. ಪ್ರಾಯೋಗಿಕ ದತ್ತಾಂಶಗಳ ಆಧಾರದ ಮೇಲೆ ಮೀಸಲಾತಿ ಕಲ್ಪಿಸಬೇಕು. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ 1ರಷ್ಟು ಮೀಸಲಾತಿ ನೀಡಬೇಕು. ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೆ ಕ್ರಮ ತೆಗೆದುಕೊಳ್ಳಬೇಕು. ಸ್ಪೃಶ್ಯ–ಅಸ್ಪೃಶ್ಯ ಎಂಬ ಪದಗಳನ್ನು ಸರ್ಕಾರದ ಕಡತಗಳಿಂದಲೇ ತೆಗೆದುಹಾಕಿ ದಮನಿತ, ಶೋಷಿತ ಹಾಗೂ ವಿಮುಕ್ತ ಜಾತಿಗಳೆಂದು ಹೆಸರಿಸಬೇಕು ಎಂದು ಒತ್ತಾಯಿಸಿದರು.

ಮಂಜುಳಾ ಬಾಯಿ, ಮಂಜಾ ನಾಯ್ಕ್, ರಂಗನಾಥ್, ಸಂತೋಷ್ ನಾಯ್ಕ್, ಜಯನಾಯ್ಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.