ಮಂಗಳವಾರ, ಅಕ್ಟೋಬರ್ 20, 2020
23 °C

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಪುತ್ರ ಸುಹಾಸ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಅವರ ಪುತ್ರ ಸುಹಾಸ್(31) ಭಾನುವಾರ ಹೃದಯಾಘಾತದಿಂದ ನಿಧನರಾದರು.

ಬೆಳಿಗ್ಗೆ ಮನೆಯ ಮಹಡಿಯಿಂದ ಇಳಿಯುವ ವೇಳೆ ಹೃದಯಾಘಾತದಿಂದಾಗಿ ಕುಸಿದುಬಿದ್ದಿದ್ದಾರೆ. ತಕ್ಷಣವೇ ಅವರನ್ನ ನಂಜಪ್ಪ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಆರ್.ಪ್ರಸನ್ನ ಕುಮಾರ್ ಅವರಿಗೆ ಸುಹಾಸ್ ಮತ್ತು ಸೂರಜ್ ಇಬ್ಬರು ಪುತ್ರರು. ಸೂರಜ್ ಅಮೇರಿಕದಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಸುಹಾಸ್ ಶಿವಮೊಗ್ಗದಲ್ಲೆ ಪೆಟ್ರೋಲ್ ಬಂಕ್ ನೋಡಿಕೊಳ್ಳುತ್ತಿದ್ದರು. ಮೂರು ವರ್ಷದ ಹಿಂದೆ ಮದುವೆಯಾಗಿತ್ತು.

2013ರಲ್ಲಿ ತಮ್ಮ ಸ್ನೇಹಿತರೊಂದಿಗೆ ಮಂಡಗದ್ದೆಗೆ ತೆರಳಿ, ಶಿವಮೊಗ್ಗಕ್ಕೆ ವಾಪಸಾಗುತ್ತಿದ್ದ ವೇಳೆ ಸುಹಾಸ್ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು.  ಅಂದಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅಪಘಾತ ನಂತರ ಹಲವು ಬಾರಿ ಶಸ್ತ್ರಚಿಕಿತ್ಸೆ ನಡೆದಿತ್ತು. ಆದರೂ, ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಭಾನುವಾರ ಸಂಜೆ 4ಕ್ಕೆ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.