ಭಾನುವಾರ, ಜುಲೈ 25, 2021
21 °C

ಸುಮಲತಾ, ಕುಮಾರಸ್ವಾಮಿ ಆರೋಪ–ಪ್ರತ್ಯಾರೋಪ ನಿಲ್ಲಿಸಲಿ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ‘ಮಂಡ್ಯದಲ್ಲಿನ ಗಣಿಗಾರಿಕೆ ಸಂಬಂಧ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರೋಪ–ಪ್ರತ್ಯಾರೋಪ ಮಾಡುವುದನ್ನು ನಿಲ್ಲಿಸಬೇಕು. ಅವರು ನಿಲ್ಲಿಸುತ್ತಾರೋ ಇಲ್ಲವೋ, ನೀವು ಮಾಧ್ಯಮದವರಾದರೂ ಅದನ್ನು ತೋರಿಸುವುದನ್ನು ನಿಲ್ಲಿಸಿ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಖಾರವಾಗಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಧ್ಯಮಗಳಲ್ಲಿ ಬೆಳಿಗ್ಗೆಯಿಂದ ರಾತ್ರಿ ಮಲಗುವವರೆಗೂ ಅವರ ಸುದ್ದಿಯನ್ನು ಪ್ರಸಾರ ಮಾಡುತ್ತೀರಿ, ನಿಮಗೆ ಬೇರೆ ವಿಷಯವೇ ಇಲ್ಲವೇ? ಅವರು ಏನು ಹೇಳಿದರು, ಇವರು ಏನು ಹೇಳಿದ್ರೂ ಅಂತ ಅವರ ಬಗ್ಗೆನೇ ತೋರಿಸುತ್ತಿದ್ದೀರಿ. ಅದಕ್ಕೆ ಏನಾದರೂ ಅರ್ಥವಿದೆಯೇ? ಅವರು ಎಳೆದುಕೊಂಡು ಹೋಗುತ್ತಿದ್ದಾರೆ. ನೀವು ಹೋಗುತ್ತಿದ್ದೀರಾ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕೆಆರ್‌ಎಸ್‌ ಬಿರುಕು ವಿಚಾರವಾಗಿ ಸಚಿವ ಮುರುಗೇಶ ನಿರಾಣಿ ಮಾತನಾಡಿದ್ದಾರೆ. ಸಾಕು ಇಲ್ಲಿಗೆ ನಿಲ್ಲಿಸಿಬಿಡಿ. ದೇಶದಲ್ಲಿ ಬೇಕಾದಷ್ಟು ಸಮಸ್ಯೆಗಳು ಇವೆ’ ಎಂದು ಹೇಳಿದರು.

‘ಸುಮಲತಾ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಬಗ್ಗೆ ನನಗೆ ಗೌರವವಿದೆ. ನಾನು ಅವರಿಬ್ಬರ ಬಗ್ಗೆ ಟೀಕೆ ಮಾಡಲು ಹೋಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು