ಶಿವಮೊಗ್ಗ: ಇಲ್ಲಿನ ಜಿಲ್ಲಾ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂತ್ರರೋಗ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ಮೂತ್ರಪಿಂಡ ಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರ ಸೇವೆಗಳು ಸೋಮವಾರ ಮತ್ತು ಗುರುವಾರ ದೊರೆಯಲಿದ್ದು, ಒಪಿಡಿ ಸೌಲಭ್ಯ ಕಲ್ಪಿಸಲಾಗಿದೆ.

ನರರೋಗ ವಿಭಾಗದ ಒಪಿಡಿಯು ಸೋಮವಾರ, ಬುಧವಾರ, ಶುಕ್ರವಾರದಂದು ತೆರೆಯಲಿದ್ದು, ನರರೋಗ ಶಸ್ತ್ರಚಿಕಿತ್ಸಾ ಸೇವೆಗೆ ಮಂಗಳವಾರ, ಗುರುವಾರ, ಶನಿವಾರ ಸೇವೆ ಹೊರ ರೋಗಿಗಳಿಗೆ ಲಭ್ಯವಿದ್ದು, ಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ ರೋಗಿಗಳನ್ನು ದಾಖಲಿಸಿಕೊಂಡು ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.

ಸೂಪರ್ ಸ್ಪೆಷಾಲಿಟಿ ವಿಭಾಗದಲ್ಲಿ 60 ವಾರ್ಡ್ಗಳನ್ನು ಪ್ರಾರಂಭಿಸಲಾಗಿದ್ದು, ರೋಗಿಗಳು ಸೌಲಭ್ಯ ಪಡೆದುಕೊಳ್ಳಬೇಕು ಎಂದು ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ ತಿಳಿಸಿದ್ದಾರೆ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.