ಬುಧವಾರ, ಮೇ 18, 2022
21 °C

ಮರಕ್ಕೆ ಟಾಟಾ ಏಸ್‌ ಡಿಕ್ಕಿ: ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೊರಬ: ತಾಲ್ಲೂಕಿನ ಚಿತ್ರಟ್ಟೆಹಳ್ಳಿ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಜಾತ್ರಾ ಕಾರ್ಯಕ್ರಮ ಮುಗಿಸಿಕೊಂಡು ಟಾಟಾ ಏಸ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದು ಒಂದೇ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ತವನಂದಿ ಗ್ರಾಮದ ಯೋಗರಾಜಪ್ಪ (57), ತಿಮ್ಮಪ್ಪ (45) ಹಾಗೂ ಆಕಾಶ್ (13) ಮೃತಪಟ್ಟವರು.

ಸಾಗರ ತಾಲ್ಲೂಕಿನ ಗುತ್ತನಹಳ್ಳಿ ಗ್ರಾಮದಲ್ಲಿ ನಡೆದ ಜಾತ್ರೆಗೆ ತೆರಳಿದ್ದ ಅವರು, ರಾತ್ರಿ ಗ್ರಾಮಕ್ಕೆ ವಾಪಸಾಗು
ತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನವು ಮರಕ್ಕೆ ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಚಾಲಕ ಹನುಮಂತಪ್ಪ ಮತ್ತು ನಿರಂಜನ ಇಬ್ಬರೂ ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಎಲ್. ರಾಜಶೇಖರ್ ಹಾಗೂ ಪಿಎಸ್‍ಐ ದೇವರಾಯ ಸ್ಥಳಕ್ಕೆ ಭೇಟಿ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.