ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ | ಶಿಕ್ಷಕಿ ಭಾಗೀರಥಿಗೆ ರಾಜ್ಯಮಟ್ಟದ ಪ್ರಶಸ್ತಿ

Published 4 ಸೆಪ್ಟೆಂಬರ್ 2024, 14:18 IST
Last Updated 4 ಸೆಪ್ಟೆಂಬರ್ 2024, 14:18 IST
ಅಕ್ಷರ ಗಾತ್ರ

ಶಿವಮೊಗ್ಗ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ನೀಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗದ ಗುತ್ಯಪ್ಪ ಕಾಲೊನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಎಂ. ಭಾಗೀರಥಿ ಭಾಜನರಾಗಿದ್ದಾರೆ.

ಭಾಗೀರಥಿ 30 ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಶಾಲೆಯ ಉಳಿವಿಗಾಗಿ ಹಾಜರಾತಿಯ ಸಂಖ್ಯೆ ಹೆಚ್ಚಿಸಲು ಅನೇಕ ಕಾರ್ಯಕ್ರಮಗಳ ರೂಪಿಸಿದ್ದಾರೆ. ವಿವಿಧ ದಾನಿಗಳ ಸಹಾಯ ಪಡೆದು ಶಾಲಾ ಮಕ್ಕಳಿಗೆ ಕಲಿಕಾ ಉಪಕರಣಗಳು ಸೇರಿದಂತೆ ಇತರ ಮೂಲಸೌಲಭ್ಯ ದೊರಕಿಸಿಕೊಡಲು ಕಾರಣರಾಗಿದ್ದಾರೆ. 

ನಲಿ-ಕಲಿ ತಂಡದ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿರುವ ಭಾಗೀರಥಿ ಶಿಕ್ಷಣದ ಗುಣಮಟ್ಟ ಹೆಚ್ಚಲು ಕಾರಣರಾಗಿದ್ದಾರೆ. ಈಗಾಗಲೇ ‘ಸೇವಾ ಯೋಧ ರತ್ನ’, ‘ಜನ ಮೆಚ್ಚಿದ ಶಿಕ್ಷಕಿ’, ‘ಕ್ರಿಯಾಶೀಲ ಸೇವಾ ಪ್ರಶಸ್ತಿ’, ‘ಸಾವಿತ್ರಿಬಾಯಿ ಫುಲೆ ಪ್ರಶಸ್ತಿ’ ಸೇರಿದಂತೆ ಸಂಘ ಸಂಸ್ಥೆಗಳಿಂದ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. 

ಈ ಪ್ರಶಸ್ತಿಯು ₹ 25,000 ನಗದು ಒಳಗೊಂಡಿದೆ. ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಾರ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT