ಹೊಸ ವೃಂದ ಹಾಗೂ ನೇಮಕಾತಿ ನಿಯಮದ ಅನುಸಾರ ಮುಖ್ಯಶಿಕ್ಷಕರು ಬಡ್ತಿಯಿಂದ ವಂಚಿತರಾಗಿದ್ದಾರೆ. ವಿದ್ಯಾರ್ಹತೆ ಹೊಂದಿದ್ದರೂ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್-2ಗೆ ಅವಕಾಶ ಇಲ್ಲ. ವರ್ಗಾವಣೆ ಸಂದರ್ಭದಲ್ಲಿ ಖಾಲಿ ಹುದ್ದೆಗಳನ್ನು ಜಿ.ಪಿ.ಟಿ. ಹುದ್ದೆಗೆ ಅವಕಾಶ ಕಲ್ಪಿಸಿ ಶಿಕ್ಷಕ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಜಯಂತಿ ಎನ್.ಕೆ., ಪ್ರಧಾನ ಕಾರ್ಯದರ್ಶಿ ಲಕ್ಷಣ್ ಟಿ.ಆರ್. ಅವರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.