ಶಿವಮೊಗ್ಗ: ವೇತನಾನುದಾನ ನೀಡಲು ಆಗ್ರಹಿಸಿ ರಾಜ್ಯ ಅನುದಾನ ರಹಿತ ಶಾಲಾ– ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಆರಂಭವಾಗಿರುವ ಉಪವಾಸ ಸತ್ಯಾಗ್ರಹ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿತು.

ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸ್ಥಳಕ್ಕೆ ಬಂದು ಪ್ರತಿಭಟನಕಾರರ ಅಳಲು ಆಲಿಸಿದರು.

ಶಾಸಕ ಚನ್ನಬಸಪ್ಪ ಪ್ರತಿಭಟನಾ ಸ್ಥಳಕ್ಕೆ ಬಂದ ವೇಳೆ ನಿರಶನ ನಿರತ ಶಿಕ್ಷಕಿಯೊಬ್ಬರು ಅಸ್ವಸ್ಥಗೊಂಡು ಕುಸಿದುಬಿದ್ದರು. ಆಂಬುಲೆನ್ಸ್ ಕರೆಯಿಸಿ ಶಾಸಕರೇ ಶಿಕ್ಷಕಿಯನ್ನು ಆಸ್ಪತ್ರೆಗೆ ಕಳುಹಿಸಿದರು.

‘1995ರಿಂದ 2005ರ ಅವಧಿಯಲ್ಲಿ ಆರಂಭವಾಗಿರುವ ಅನುದಾನರಹಿತ ಕನ್ನಡ ಮಾಧ್ಯಮದ ಎಲ್ಲ ಶಾಲೆ, ಕಾಲೇಜುಗಳಿಗೆ ವೇತನಾನುದಾನ ನೀಡುವಂತೆ ಕೋರಿ 20 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇವೆ. ಅನುದಾನ ಕೊಡುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಯಾವುದೇ ಸರ್ಕಾರ ನಮ್ಮ ಅಳಲಿಗೆ ಸ್ಪಂದಿಸಿಲ್ಲ’ ಎಂದು ಹೋರಾಟ ನಿರತರು ದೂರಿದರು.

‘ಅನುದಾನಿತ ಶಾಲೆಗಳ ಉಳಿವಿಗಾಗಿ ಕರ್ನಾಟಕ ರಾಜ್ಯೋತ್ಸವಕ್ಕೆ ಶುಭ ಸುದ್ದಿಕೊಡುವುದಾಗಿ ಸ್ವತಃ ಶಿಕ್ಷಣ ಸಚಿವರು ಭರವಸೆ ನೀಡಿದ್ದರು. ಅದು ಕೂಡ ವಿಫಲವಾಗಿದೆ. ನಮಗೆ ಆತ್ಮಹತ್ಯೆ ಮಾಡಿಕೊಳ್ಳುವ ದಾರಿ ಮಾತ್ರ ಉಳಿದಿದೆ’ ಎಂದು ಪ್ರತಿಭಟನಕರರು ಹೇಳಿದರು.

ಅದಕ್ಕೆ ಪ್ರತಿಕ್ರಿಯಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ, ‘ಅನುದಾನರಹಿತ ಶಿಕ್ಷಣ ಸಂಸ್ಥೆಗಳ ನೌಕರರ ಸಮಸ್ಯೆಗಳ ಬಗ್ಗೆ ಈಗಾಗಲೇ ಸರ್ಕಾರದ ಗಮನಕ್ಕೆ ತರಲಾಗಿದೆ. ಶಿಕ್ಷಣ ಸಚಿವರು ಕೂಡ ಸ್ಪಂದಿಸಿದ್ದಾರೆ. ದಯವಿಟ್ಟು ಪ್ರತಿಭಟನೆ ವಾಪಸ್ ಪಡೆಯಿರಿ’ ಎಂದು ಮನವಿ ಮಾಡಿದರು.

ಬೆಳಗಾವಿಯಲ್ಲಿ ಡಿಸೆಂಬರ್ನಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಅನುದಾನರಹಿತ ಶಾಲಾ ಶಿಕ್ಷಕರ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೋರಾಟಗಾರರಿಂದ ಮನವಿ ಪಡೆದರು. ರಾತ್ರಿ ವೇಳೆ ಇಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಆದರೂ, ಮಹಿಳೆಯರು ಇರುವುದರಿಂದ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ಅಭಯ ನೀಡಿದರು. ‘ಈಗಾಗಲೇ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ದಯವಿಟ್ಟು ಹೋರಾಟ ವಾಪಸ್ ಪಡೆಯಿರಿ’ ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಶಿಕ್ಷಕರು ಪಾಲ್ಗೊಂಡಿದ್ದಾರೆ.

ಸರ್ಜಿ ಸಂಧಾನ ವಿಫಲ ಮುಂದುವರಿದ ಹೋರಾಟ.. ಪ್ರತಿಭಟನಕಾರರನ್ನು ಭೇಟಿಯಾದ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಇದೇ ವೇಳೆ ಸಚಿವ ಮಧು ಬಂಗಾರಪ್ಪ ಅವರಿಗೆ ಸರ್ಜಿ ಕರೆ ಮಾಡಿ ಮಾತನಾಡಿದರು. ‘ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಬೇಡಿಕೆ ನನ್ನ ಗಮನದಲ್ಲಿ ಇದೆ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಳಿ ನಿಯೋಗ ಕರೆದೊಯ್ದು ಸಮಸ್ಯೆ ಬಗೆಹರಿಸುವೆ. ಹೀಗಾಗಿ ಉಪವಾಸ ಸತ್ಯಾಗ್ರಹ ಹಿಂಪಡೆಯಿರಿ’ ಎಂದು ಪ್ರತಿಭಟನಾ ನಿರತರಿಗೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು. ‘ಸಚಿವರೇ ಇಲ್ಲಿಗೆ ಬರಬೇಕು. ನಮ್ಮ ಅಳಲು ಆಲಿಸಿ ಲಿಖಿತ ಭರವಸೆ ಕೊಡಬೇಕು. ಅಲ್ಲಿಯವರೆಗೂ ಹೋರಾಟ ಕೈಬಿಡುವುದಿಲ್ಲ’ ಎಂದು ಪಟ್ಟುಹಿಡಿದ ಪ್ರತಿಭಟನಕಾರರು ಹೋರಾಟ ಮುಂದುವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.