ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಲಭ್ಯ ಪಡೆಯಲು ಸಾಂಘಿಕ ಹೋರಾಟ ಅಗತ್ಯ: ಅಶೋಕ ಹಾರನಹಳ್ಳಿ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಅಶೋಕ ಹಾರನಹಳ್ಳಿ ಕರೆ
Last Updated 13 ಜೂನ್ 2022, 7:00 IST
ಅಕ್ಷರ ಗಾತ್ರ

ಶಿವಮೊಗ್ಗ: ಬ್ರಾಹ್ಮಣ ಸಮಾಜ ಎಚ್ಚೆತ್ತುಕೊಳ್ಳುವುದರ ಜತೆಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರಕಬೇಕಾದ ಸೌಲಭ್ಯಗಳನ್ನು ಪಡೆಯಲು ಸಂಘಟಿತ ಹೋರಾಟ ನಡೆಸಬೇಕಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು.

ಶಿವಮೊಗ್ಗದಲ್ಲಿ ಶನಿವಾರ ಜಿಲ್ಲೆಯ ಬ್ರಾಹ್ಮಣ ಸಂಘಟನೆಗಳಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

‘ಬ್ರಾಹ್ಮಣರು ನಾವೊಬ್ಬರೇ ಒಳ್ಳೆಯದಾಗಲಿ ಎಂದು ಹೇಳಿದವರಲ್ಲ. ಮೂಲತಃ ಜಾತಿವಾದಿಗಳಲ್ಲ. ಬ್ರಾಹ್ಮಣರು ಜಾತ್ಯತೀತರು. ಆದರೆ, ಇಂದು ಸಾಧನೆ ಮಾಡಿದವರು ಸಹ ತಾವು ಬ್ರಾಹ್ಮಣರು ಎಂದು ಹೇಳಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಈ ರೀತಿ ಆಗಬಾರದು. ನಾವು ಬ್ರಾಹ್ಮಣರು ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು’ ಎಂದರು.

‘ಶಿಕ್ಷಣ ಕ್ಷೇತ್ರ ಸೇರಿದಂತೆ ಯಾವ ಕ್ಷೇತ್ರದಲ್ಲೂ ಬಡ ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಸಂವಿಧಾನದಲ್ಲಿ ಅವಕಾಶವಿದ್ದರೂ ಬ್ರಾಹ್ಮಣರಿಗೆ ಸಿಗುತ್ತಿಲ್ಲ. ನಮ್ಮ ಪಂಗಡದಲ್ಲಿ ಇರುವವರಿಗೆ ಸಹಾಯ ಮಾಡುವುದು ನಮ್ಮ ಜವಬ್ದಾರಿ. ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಸಮಾಜದವರು ಮುಂದೆ ಬರಬೇಕು’ ಎಂದು ಕರೆ ನೀಡಿದರು.

ಬ್ರಾಹ್ಮಣ ಮಹಾಸಭಾ ಕೇವಲ ಬೆಂಗಳೂರಿಗೆ ಸೀಮಿತವಾಗಿರದೇ ಪ್ರತಿ ತಾಲ್ಲೂಕು ಮತ್ತು ಜಿಲ್ಲೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.‌ ಬ್ರಹ್ಮ ಸಮಾಜದ ಮಹಿಳಾ ಹಾಗೂ ಯುವ ಸಂಘಟನೆಯ ಪ್ರತಿನಿಧಿಗಳನ್ನು ಜೋಡಿಸುವ ಕಾರ್ಯ ಆಗುತ್ತಿದೆ ಎಂದರು.

ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ್ ಭಾಗವತ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಶ್ವೇಶ್ವರಯ್ಯ ರಾಷ್ಟ್ರೀಯ ತಾಂತ್ರಿಕ ವಿದ್ಯಾಲಯದ ನಾಗಪುರ ನಿರ್ದೇಶಕ ವಸಂತ ದಿವಾಕರ್, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್, ಮ್ಯಾಮ್ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ, ಕೃಷಿ ಮಿಷನ್ ರಾಜ್ಯಾಧ್ಯಕ್ಷ ಆ.ಆನಂದ್, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ್, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ್, ರಾಜ್ಯ ಪತ್ರಿಕಾ ಅಕಾಡೆಮಿ ಸದಸ್ಯರಾದ ಗೋಪಾಲ್ ಯಡಗೆರೆ, ವ್ಯಾಲ್ಯೂ ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸಮೂರ್ತಿ, ವಿಪ್ರ ಟ್ರಸ್ಟ್ ಅಧ್ಯಕ್ಷ ಎ.ವಿ. ಶ್ಯಾಮಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ.ನಟರಾಜ್ ಭಾಗವತ್ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗದ ಶೃಂಗೇರಿ ಶಂಕರಮಠದ ಧರ್ಮಾಧಿಕಾರಿ ಪಿ.ನಾರಾಯಣ್ ಅವರು ಅಶೋಕ ಹಾರನಹಳ್ಳಿ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಿದರು.

ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಎಂ.ಬಿ.ಭಾನುಪ್ರಕಾಶ್, ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಮಾಜಿ ಅಧ್ಯಕ್ಷ ಎ.ಎಸ್.ಪದ್ಮನಾಭ ಭಟ್, ಸಮಾಜದ ಪ್ರಮುಖರಾದ ಎಸ್.ದತ್ತಾತ್ರಿ, ಕೆ.ದಿವಾಕರ್, ಎಂ.ಶಂಕರ್, ಡಾ.ರವಿಕಿರಣ್, ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT