ಕೋಣಂದೂರು: ಅಂಕಗಳಿಂದ ಆತ್ಮವಿಶ್ವಾಸ ಹೆಚ್ಚಬೇಕೇ ವಿನಾ ಅಹಂಕಾರವಲ್ಲ ಎಂದು ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಶೈಲಾ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಗೆಳೆಯರ ಬಳಗದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಅಂಕ ಪ್ರಜ್ಞೆ ಮತ್ತು ಆತ್ಮ ವಿಶ್ವಾಸ’ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಗ್ರಾಮ ಪಂಚಾಯಿತಿಗಳು ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸೀಮಿತವಾಗಬಾರದು. ಇಂತಹ ಕಾರ್ಯಕ್ರಮಗಳ ಮೂಲಕ ರಾಜಕೀಯ ಮತ್ತು ಸಂಸ್ಕೃತಿಗಳ ಬೆನ್ನೆಲುಬುಗಳಾಗಿ ಕೆಲಸ ಮಾಡಬೇಕು. ಇಂದು ಬುದ್ಧಿವಂತಿಕೆಗಿಂತ ಕೌಶಲ ಮುಖ್ಯ. ವಿದ್ಯಾರ್ಥಿಗಳು ಕೌಶಲವನ್ನು ಬೆಳೆಸಿಕೊಂಡಲ್ಲಿ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.

ಹೆತ್ತವರ ಕನಸುಗಳನ್ನು ನನಸು ಮಾಡಲು ಸನ್ಮಾನಗಳು ಪ್ರೇರಣೆ ನೀಡುತ್ತವೆ ಎಂದು ಅಗ್ರಹಾರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀಪತಿ ಹಳಗುಂದ ಹೇಳಿದರು.

ಅಗ್ರಹಾರ ಹೋಬಳಿಯ ಎಂಟು ಪ್ರೌಢಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಹಾಗೂ ಕನ್ನಡದಲ್ಲಿ 125ಕ್ಕೆ 125 ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನ್ನಪೂರ್ಣ ವಾಸುದೇವ, ಉಪಾಧ್ಯಕ್ಷೆ ಸುಜಾತಾ ಚೂಡಾಮಣಿ, ಕರ್ನಾಟಕ ಜಾನಪದ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಕೆ.ಎಂ.ಸುಧಾಕರ್, ಕನ್ನಡ ಸಾಹಿತ್ಯ, ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಕೆ.ಬಿ.ಪ್ರಕಾಶ್, ರೋಟರಿ ಕ್ಲಬ್ ಅಧ್ಯಕ್ಷ ಡಿ.ಆರ್.ಗಿರೀಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ ಮೇಲಿನಕೊಪ್ಪ, ಕೆ.ವಿ.ಕೇಶವಮೂರ್ತಿ, ಬಿ.ಇ.ಅಬ್ಬಾಸ್, ಪಿ.ಡಿ.ಓ.ನಾಗರಾಜ್, ಸಂತೋಷ್, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.ಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.