ಶುಕ್ರವಾರ, ಫೆಬ್ರವರಿ 3, 2023
25 °C

ಸರ್ಕಾರದ ಯೋಜನೆ ತಿಳಿಸಿ ಪಕ್ಷ ಸಂಘಟಿಸಿ: ಸಂಸದ ಬಿ.ವೈ. ರಾಘವೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಕಾರಿಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷ ಸಂಘಟಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ನೀಡುತ್ತಿದೆ. ಮಾತೃವಂದನಾ, ಸುಕನ್ಯ ಸಮೃದ್ಧಿ ಯೋಜನೆ, ‘ಬೇಟಿ ಪಡಾವೋ ಬೇಟಿ ಬಚಾವೋ’ ಯೋಜನೆ, ಪೋಷಣ್ ಅಭಿಯಾನ, ಉಜ್ವಲ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಮಹಿಳೆಯರಿಗೆ ನೀಡಿದೆ. ಮಹಿಳಾ ಮೋರ್ಚಾ ಪದಾಧಿಕಾರಿಗಳು ಪಕ್ಷ ಸಂಘಟನೆಗಾಗಿ ಸಮಯ ಮೀಸಲಿಡಬೇಕು ಎಂದು ಸಲಹೆ ನೀಡಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಎಂಸಿಎ ನಿರ್ದೇಶಕ ಕೆ.ಜಿ. ವಸಂತಗೌಡ್ರು, ತಾಲ್ಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ್ ಸಿಂಗ್, ಮಾಜಿ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು