ಸಾಲದ ಹೊರೆ: ರೈತ ಆತ್ಮಹತ್ಯೆ

ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದ ರೈತ ಎಸ್. ವಸಂತ ಕುಮಾರ (34) ಅವರು ಸಾಲದ ಹೊರೆಯಿಂದ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐದು ವರ್ಷಗಳಿಂದ ಜಮೀನು ಬಾಡಿಗೆ ಪಡೆದು ಶುಂಠಿ ಬೆಳೆದಿದ್ದರು. ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿ ಕೈಸುಟ್ಟುಕೊಂಡಿದ್ದರು. ಸಂಘ–ಸಂಸ್ಥೆ ಹಾಗೂ ಖಾಸಗಿ ಸಾಲ ಸೇರಿ ₹ 15 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು. ಸಾಲದ ಹೊರೆಯಿಂದ ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೆತಾರಿಗಾ ಗ್ರಾಮದ ಕಾಡಿನಲ್ಲಿ ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದು ಕುಟುಂಬದವರು ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ ದಾರಿಹೋಕರು ಕಾಡಿನ ಮಧ್ಯೆ ಬೈಕ್ ನಿಂತಿದ್ದು ಗಮನಿಸಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ಅವರಿಗೆ ಪತ್ನಿ ಹಾಗೂ ಒಂದು ವರ್ಷದ ಹೆಣ್ಣುಮಗು ಇದೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.