ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಳಕೊಪ್ಪ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಕಾರು

Published 18 ಮೇ 2024, 13:07 IST
Last Updated 18 ಮೇ 2024, 13:07 IST
ಅಕ್ಷರ ಗಾತ್ರ

ಶಿರಾಳಕೊಪ್ಪ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೋಟೆಲ್ ಒಳಗೆ ನುಗ್ಗಿರುವ ಘಟನೆ ಪಟ್ಟಣದಲ್ಲಿ ಶನಿವಾರ ನಡೆದಿದೆ.

ಪಟ್ಟಣದ ಸೊರಬ ರಸ್ತೆ ಹಾಗೂ ಆನವಟ್ಟಿ ರಸ್ತೆ ಸೇರುವ ವೃತ್ತದಲ್ಲಿ ಹುಬ್ಬಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೀದಾ ಮಂಜುನಾಥ ಹೋಟೆಲ್ ಒಳಗೆ ನುಗ್ಗಿದೆ. ಈ ಸಂದರ್ಭದಲ್ಲಿ ಹೋಟೆಲ್‌ನಲ್ಲಿ ಉಪಾಹಾರ ಸೇವಿಸುತ್ತಿದ್ದ ಅಜ್ಜ, ಮೊಮ್ಮಗನಿಗೆ  ಕಾರು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಸಾರ್ವಜನಿಕರು ಕಾರನ್ನು ಹೊರಗೆ ತೆಗೆದರು. ಈ ಕಾರಿನಲ್ಲಿ ಬೆಳಗಾವಿ ಮೂಲದ ಕುಟುಂಬದವರು ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನಕ್ಕೆ ಹೋಗುತ್ತಿದ್ದರು. ಮಹಿಳೆಯರು ಮತ್ತು ಮಕ್ಕಳು ಇದ್ದರು. ಅದೃಷ್ಟವಶಾತ್ ಯಾರಿಗೂ ಹಾನಿ ಆಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT