ಭಾನುವಾರ, ಜನವರಿ 23, 2022
27 °C

ವಿಜೃಂಭಣೆಯ ಶಕ್ತಿ ದೇವತೆಗಳ ಸಮಾಗಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಇಲ್ಲಿನ ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಎಳ್ಳಮಾವಾಸ್ಯೆ ಅಂಗವಾಗಿ ಭಾನುವಾರ ಶಕ್ತಿ ದೇವತೆಗಳ ಸಮಾಗಮ ವಿಜೃಂಭಣೆಯಿಂದ ನೆರವೇರಿತು.

ನಗರದ ಎಲ್ಲ ಶಕ್ತಿ ದೇವತೆಗಳನ್ನು ಬೆಳಿಗ್ಗೆಯೇ ದೇವಾಲಯಕ್ಕೆ ಮೆರವಣಿಗೆ ಮೂಲಕ ತಂದು, ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.

ಮಧ್ಯಾಹ್ನ ಮಹಾಮಂಗಳಾರತಿ ನಂತರ ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನದಿಂದ ರಾತ್ರಿವರೆಗೂ ದೇವತೆಗಳಿಗೆ ಮಹಿಳೆಯರು ಉಡಿ ಸಮರ್ಪಿಸಿದರು. ರಾತ್ರಿ ಉತ್ಸವ ಮೂರ್ತಿಗಳು ಪೂಜೆ ಸ್ವೀಕರಿಸಿ ಸ್ವಸ್ಥಾನಕ್ಕೆ ಮರಳಿದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.