ಸಾಗರ: ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಸತತವಾಗಿ ಮಳೆ ಸುರಿಯುತ್ತಿದೆ. ನಗರ ಪ್ರದೇಶದಲ್ಲಿ ಹಲವೆಡೆ ಚರಂಡಿಗಳ ದುರವಸ್ಥೆಯಿಂದ ನೀರು ಸರಾಗವಾಗಿ ಹರಿಯದೆ ರಸ್ತೆಯ ಮೇಲೆ ನೀರು ನಿಂತಿದ್ದು ವಾಹನ, ಪಾದಚಾರಿಗಳ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದೆ.

ಗ್ರಾಮೀಣ ಭಾಗದಲ್ಲಿ ಹಲವೆಡೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವೆಡೆ ಸರ್ಕಾರಿ ಶಾಲಾ ಕಟ್ಟಡಗಳಿಗೆ ಹಾನಿ ಸಂಭವಿಸಿದೆ.

ಮಾರ್ಚ್ 1 ರಿಂದ ಮೇ 26ರವರೆಗೆ 89.8 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ ಈ ಅವಧಿಯಲ್ಲಿ 274.6 ಮಿ.ಮೀ. ಮಳೆಯಾಗಿದೆ.

ತಾಲ್ಲೂಕಿನಲ್ಲಿ 550 ಹೆಕ್ಟೇರ್ ಪ್ರದೇಶದಲ್ಲಿ ಬೇಸಿಗೆಯಲ್ಲಿ ಭತ್ತ, ಜೋಳ ಬೆಳೆಯಲಾಗಿದ್ದು ಶೇ 80ರಷ್ಟು ಬೆಳೆ ಕಟಾವು ಮುಗಿದಿದೆ. ಹೀಗಾಗಿ ಉಳಿದ ಬೆಳೆಗೆ ಅವಧಿಪೂರ್ವ ಮುಂಗಾರು ಮಳೆಯಿಂದಾಗಿ ತೊಂದರೆ ಉಂಟಾಗಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.

‘ಮಳೆಯ ಪ್ರಮಾಣ ತಗ್ಗದಿರುವುದರಿಂದ ಬೇಸಿಗೆ ಬೆಳೆಗೆ ಹಾನಿ ಉಂಟಾಗಿರುವ ಪ್ರದೇಶಕ್ಕೆ ಭೇಟಿ ನೀಡಲು ಇಲಾಖೆ ಸಿಬ್ಬಂದಿಗೆ ಸಾಧ್ಯವಾಗುತ್ತಿಲ್ಲ. ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಕುರಿತು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಕುಮಾರ್ ಕೆ. ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಮುಂಗಾರಿನಲ್ಲಿ 12,450 ಹೆಕ್ಟೇರ್ ಪ್ರದೇಶದಲ್ಲಿ ಭತ್ತ, 1,700 ಹೆಕ್ಟೇರ್ ಪ್ರದೇಶದಲ್ಲಿ ಜೋಳ, 60 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತದೆ. ಇಲಾಖೆ ವತಿಯಿಂದ ರೈತರಿಗೆ ರಿಯಾಯಿತಿ ದರದಲ್ಲಿ ಭತ್ತ ಹಾಗೂ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ವಿತರಿಸಲು ಸಿದ್ದತೆ ನಡೆದಿದೆ. ಆಯಾ ರೈತ ಸಂಪರ್ಕ ಕೇಂದ್ರಗಳ ಮೂಲಕ ಅವುಗಳನ್ನು ವಿತರಿಸಲಾಗುವುದು ಎಂದು ಚಂದ್ರಪ್ಪ ಕೆ. ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.