ಶುಕ್ರವಾರ, ಸೆಪ್ಟೆಂಬರ್ 17, 2021
26 °C

ಸೊರಬದಲ್ಲಿ ಬಿ. ಸಿ ಪಾಟೀಲ್‌, ಎಸ್‌.ಟಿ ಸೋಮಶೇಖರ್‌ ಯೋಗ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೊರಬ: ಕೃಷಿ ಸಚಿವ ಬಿ.ಸಿ. ಪಾಟೀಲ್ ತಮ್ಮ ಸ್ವಗ್ರಾಮ ಯಲವಾಳದಲ್ಲಿ ಭಾನುವಾರ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ಯೋಗ ಮಾಡುವ ಮೂಲಕ ಯೋಗ ದಿನವನ್ನು ಆಚರಿಸಿದರು.

ತಾಲ್ಲೂಕಿನ ಯಲವಾಳ ಗ್ರಾಮಕ್ಕೆ ಕೃಷಿ ಸಚಿವರೊಂದಿಗೆ ಬಂದಿದ್ದ ಬಿ.ಸಿ. ಪಾಟೀಲ್‌ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಯೋಗ ಮಾಡಿ ಕೆಲಹೊತ್ತು ಪರಸ್ಪರ ಹರಟೆಯಲ್ಲಿ ತೊಡಗಿದ್ದು ಕಂಡುಬಂತು.

ಬಳಿಕ ಮಾತನಾಡಿದ ಬಿ.ಸಿ. ಪಾಟೀಲ್, ‘ಯೋಗ ಎನ್ನುವುದು ದೈಹಿಕ ಆರೋಗ್ಯದ ಜತೆಗೆ ಮಾನಸಿಕ ನೆಮ್ಮದಿಯನ್ನೂ ನೀಡಬಲ್ಲದು. ಋಷಿಮುನಿಗಳು ಹಿಂದಿನಿಂದಲೂ ಅನುಸರಿಸಿಕೊಂಡು ಬಂದಿದ್ದ ಯೋಗವನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ. ಯೋಗಕ್ಕೆ ತನ್ನದೇ ಆದ ಇತಿಹಾಸವಿದ್ದು, ವೈಜ್ಞಾನಿಕವಾಗಿಯೂ ಸಹಕಾರಿ. ಯೋಗ ದಿನಾಚರಣೆಯಂದು ಮಾತ್ರ ಯೋಗ ಮಾಡದೇ ಪ್ರತಿನಿತ್ಯ ವ್ಯಾಯಾಮ, ಯೋಗ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು