ಶುಕ್ರವಾರ, ಫೆಬ್ರವರಿ 3, 2023
23 °C

ಸಾಗರ: ಕಾಣಿಕೆ ಹುಂಡಿ ಒಡೆದು ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕೆಳದಿ ಗ್ರಾಮದ ರಾಮೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ನಾಲ್ಕು ಹುಂಡಿಗಳನ್ನು ಒಡೆದು ಕಾಣಿಕೆ ಹಣವನ್ನು ಕಳವು ಮಾಡಲಾಗಿದೆ.

ಒಡೆದ ಹುಂಡಿಯನ್ನು ಕಳ್ಳರು ದೇವಸ್ಥಾನದ ಹಿಂಭಾಗದಲ್ಲಿ ಎಸೆದು ಹೋಗಿದ್ದಾರೆ. ಎರಡು ದಿನಗಳ ಹಿಂದೆ ಕಾರ್ತಿಕ ದೀಪೋತ್ಸವ ನಡೆದಿದ್ದು, ಭಕ್ತರಿಂದ ದೊಡ್ಡ ಮೊತ್ತದ ಕಾಣಿಕೆ ಸಂಗ್ರಹವಾಗಿದ್ದು ಅದನ್ನು ಗಮನಿಸಿಯೇ ಕಳ್ಳರು ಹುಂಡಿ ಒಡೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮುಜರಾಯಿ ಇಲಾಖೆಗೆ ಸೇರಿರುವ ಈ ದೇವಸ್ಥಾನದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಒತ್ತಾಯಿಸಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು