ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವಜ್ಞನ ತ್ರಿಪದಿ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ: ಬಂಗಾರಪ್ಪ

ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕ ಬಂಗಾರಪ್ಪ
Last Updated 12 ಜೂನ್ 2022, 5:41 IST
ಅಕ್ಷರ ಗಾತ್ರ

ಮಾರವಳ್ಳಿ (ಶಿಕಾರಿಪುರ):ಸರ್ವಜ್ಞ ತ್ರಿಪದಿಗಳ ಮೂಲಕ ಸಮಾಜಕ್ಕೆ ನೀಡಿದ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಬಂಗಾರಪ್ಪ ಹೇಳಿದರು.

ತಾಲ್ಲೂಕಿನ ಮಾರವಳ್ಳಿ ಗ್ರಾಮದ ಸಿರಿಗೆರೆ ತರಳಬಾಳು ವಿದ್ಯಾಸಂಸ್ಥೆಯ ಮಲ್ಲೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ದಿ.ಕೆ.ಎಸ್. ಚಂದ್ರು ಅವರ ಸವಿನೆನಪಿನ ದತ್ತಿ ಹಾಗೂ ಎಚ್. ಮೃತ್ಯುಂಜಯಪ್ಪ, ಈಶ್ವರಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಸರ್ವಜ್ಞನ ಕುರಿತು ಅವರು ಮಾತನಾಡಿದರು.

‘ಸರ್ವಜ್ಞ ತನ್ನ ತ್ರಿಪದಿಗಳ ಮೂಲಕ ಸಮಾಜದಲ್ಲಿರುವ ಕಂದಾಚಾರಗಳ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಜನಸಾಮಾನ್ಯರಿಗೆ ಆರ್ಥವಾಗುವ ಭಾಷೆಯಲ್ಲಿ ತ್ರಿಪದಿಗಳನ್ನುರಚಿಸಿದ್ದರು. ಸಮಾಜದಲ್ಲಿದ್ದ ಕೆಟ್ಟ
ವ್ಯವಸ್ಥೆಯನ್ನು ತಿದ್ದುವ ಕಾರ್ಯ ಮಾಡಿದ್ದರು. ಸರ್ವಜ್ಞ ಸೇರಿ ಸಮಾಜದ ಏಳಿಗೆಗಾಗಿ ಶ್ರಮಿಸಿದ ದಾರ್ಶನಿಕರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ದತ್ತಿ ಉಪನ್ಯಾಸ ಕಾರ್ಯಕ್ರಮವನ್ನುಉದ್ಘಾಟಿಸಿದ ಮಲ್ಲೇಶ್ವರ ಪ್ರೌಢಶಾಲೆ ಮುಖ್ಯಶಿಕ್ಷಕ ಯುವರಾಜ್ ನಾಯ್ಕ, ‘ಕನ್ನಡ ಭಾಷೆ ಉಳಿಸಿ ಬೆಳೆಸುವನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಡೆಸುತ್ತಿರುವ ಕಾರ್ಯಕ್ರಮಗಳು
ಶ್ಲಾಘನೀಯ. ವಿದ್ಯಾರ್ಥಿಗಳು ಕಾರ್ಯಕ್ರಮ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್. ರಘು ಅಧ್ಯಕ್ಷತೆ ವಹಿಸಿದ್ದರು. ದತ್ತಿದಾನಿಗಳ ಪುತ್ರರಾದ ಶಿಕ್ಷಕ ಕೆ.ಎಸ್. ರವಿ, ವರ್ತಕ ಹಾದ್ರಹಳ್ಳಿ ಈರಣ್ಣ, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಸುಭಾಷ್ ಚಂದ್ರ ಸ್ಥಾನಿಕ್, ಸುರಭಿ ಬಳಗದ ಅಧ್ಯಕ್ಷ ಮೃತ್ಯುಂಜಯಪ್ಪ, ಮಲ್ಲೇಶ್ವರ ಪ್ರೌಢಶಾಲೆ ಶಿಕ್ಷಕರಾದ ಪ್ರೇಮಾ, ರುದ್ರಾಚಾರ್, ಅಜ್ಜಪ್ಪ, ತಿಪ್ಪೇಶ್ ನಾಯ್ಕ, ವಸಂತ್, ಬಿ.ವಿ. ಹೊಸಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT