ಭಾನುವಾರ, ಸೆಪ್ಟೆಂಬರ್ 20, 2020
22 °C

ಶಿವಮೊಗ್ಗ | ಜಿ.ಪಂ. ಸ್ಥಾಯಿ ಸಮಿತಿಗಳ ಅಧ್ಯಕ್ಷರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಮೂರು ಸ್ಥಾಯಿ ಸಮಿತಿಗಳಿಗೆ ಬುಧವಾರ ಅಧ್ಯಕ್ಷರನ್ನು ನೇಮಿಸಲಾಗಿದೆ.

ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಆನವೇರಿ ಕ್ಷೇತ್ರದ ವೀರಭದ್ರಪ್ಪ ಪೂಜಾರ್, ಕ್ರುಷಿ ಮತ್ತು ಕೈಗಾರಿಕಾ ಸಮಿತಿಗೆ ನಗರ ಕ್ಷೇತ್ರದ ಸುರೇಶ್ ಸ್ವಾಮಿರಾವ್, ಶಿಕ್ಷಣ ಮತ್ತು ಆರೋಗ್ಯ ಸಮಿತಿಗೆ ಸುಣ್ಣದಕೊಪ್ಪ ಕ್ಷೇತ್ರದ ರೇಣುಕಾ ಹನುಮಂತಪ್ಪ ಅವರನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಕುಮಾರ್ ನೇಮಿಸಿದ್ದಾರೆ.

ಜಿಲ್ಲಾ ಪಂಚಾಯಿತಿಯಲ್ಲಿ ಈಚೆಗೆ ನಡೆದ ವಿಶೇಷ ಸಭೆಯಲ್ಲಿ ಸ್ಥಾಯಿ ಸಮಿತಿಗಳಿಗೆ ನೇಮಕ ಮಾಡುವ ಅಧಿಕಾರ ನೀಡಲಾಗಿತ್ತು.

ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಸಾಮಾನ್ಯ ಸಮಿತಿಗೆ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಪದ ನಿಮಿತ್ತ ಅಧ್ಯಕ್ಷರಾಗಿರುತ್ತಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು