ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರದಿ ನಂತರ ಜಿ.ಪಂ. ಚುನಾವಣೆ: ಈಶ್ವರಪ್ಪ

Last Updated 30 ಜನವರಿ 2022, 3:29 IST
ಅಕ್ಷರ ಗಾತ್ರ

ಶಿವಮೊಗ್ಗ: ಚುನಾವಣಾ ತಕರಾರು ಅರ್ಜಿಗಳ ಇತ್ಯರ್ಥಕ್ಕೆ ನೇಮಿಸಲಾಗಿರುವ ಲಕ್ಷ್ಮೀನಾರಾಯಣ ನೇತೃತ್ವದ ಸಮಿತಿ ವರದಿ ಸಲ್ಲಿಸಿದ ತಕ್ಷಣ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕ್ಷೇತ್ರಗಳ ವಿಂಗಡಣೆ, ಮೀಸಲಾತಿ ಸೇರಿ 780ಕ್ಕೂ ಹೆಚ್ಚು ತಕರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿಗಳನ್ನು ಪರಿಶೀಲಿಸಿದ ನಂತರ ನಿಯಮಗಳಿಗೆ ತಿದ್ದುಪಡಿ ತಂದು ಚುನಾವಣೆ ನಡೆಸಲು ಚಿಂತನೆ ನಡೆದಿದೆ. ಸಮಿತಿಯ ವರದಿ ಬಂದ ನಂತರ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಲಿವೆ’ ಎಂದರು.

‘ಸಿ.ಎಂ. ಇಬ್ರಾಹಿಂ, ಸಿದ್ದರಾಮಯ್ಯ ಅವರು ಅವಕಾಶವಾದಿ ರಾಜಕಾರಣಕ್ಕೆ ಮತ್ತೊಂದು ಹೆಸರು. ಇಬ್ಬರೂ ಅವಳಿ–ಜವಳಿ ಇದ್ದಂತೆ. ಯಾವುದೇ ಅಧಿಕಾರ ಸಿಗದಿದ್ದರೆ ಇಬ್ಬರೂ ಪಕ್ಷ ಬಿಡುವ ಮಾತನಾಡುತ್ತಾರೆ. ಹಾಗಾಗಿ, ಇಂತಹ ಅವಕಾಶವಾದಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT