ಶಿವಮೊಗ್ಗ: ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ವಿರೋಧ ಪಕ್ಷಗಳು ಏನೇ ಟೀಕೆ ಮಾಡಿದರೂ ಜನರು ಬಿಜೆಪಿ ಪರ ಇದ್ದಾರೆ ಎನ್ನುವುದಕ್ಕೆ ಶಿರಾ, ರಾಜರಾಜೇಶ್ವರಿ ನಗರಗಳ ಉಪ ಚುನಾವಣೆಯ ಫಲಿತಾಂಶ ಸಾಕ್ಷಿಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಶಿವಮೊಗ್ಗದನಗರದ ಹೊರವಲಯ ರಸ್ತೆಯಲ್ಲಿ ಭಾನುವಾರ ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರ ಕಿಯಾ ಕಾರು ಶೋರೂಂ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಶಿರಾದಲ್ಲಿ 25 ಸಾವಿರ, ಆರ್ಆರ್ ನಗರದಲ್ಲಿ 40 ಸಾವಿರಕ್ಕೂ ಹೆಚ್ಚುಮತಗಳ ಅಂತರದ ಗೆಲುವು ದೊರಕಲಿದೆ. ಚುನಾವಣೋತ್ತರ ಸಮೀಕ್ಷೆಗಳನ್ನು ಮೀರಿ ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದರು.

ಹಲವು ದಶಕಗಳಿಂದ ಇರುವಶರಾವತಿ ಸಂತ್ರಸ್ತರ ಸಮಸ್ಯೆಗಳಿಗೆ ಕಾಲಮಿತಿಯ ಒಳಗೆ ಪರಿಹಾರ ದೊರಕಿಸಲು ಸೂಚಿಸಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ಬೇಕಾದ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದರು.

ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.