ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಬಿ.ಎಸ್. ಯಡಿಯೂರಪ್ಪ

ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬಿ.ಎಸ್. ಯಡಿಯೂರಪ್ಪ
Last Updated 8 ಸೆಪ್ಟೆಂಬರ್ 2022, 7:37 IST
ಅಕ್ಷರ ಗಾತ್ರ

ಶಿಕಾರಿಪುರ:ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಬುಧವಾರ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗುರುವಿನ ಶ್ರೀರಕ್ಷೆ ಇದ್ದಾಗ ಮಾತ್ರ ಜೀವನಕ್ಕೆ ಮುಕ್ತಿ ದೊರೆಯುತ್ತದೆ. ಮಕ್ಕಳು ಮನೆಗಿಂತ ಹೆಚ್ಚು ಸಮಯ ಶಾಲಾ ಕಾಲೇಜುಗಳಲ್ಲಿ ಕಳೆಯುವುದರಿಂದ ಮಕ್ಕಳನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ದೇಶ ಸರ್ವತೋಮುಖ ಅಭಿವೃದ್ಧಿಯಾಗಲು ಶಿಕ್ಷಣ ವ್ಯವಸ್ಥೆ ಕಾರಣವಾಗಿದೆ. ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸಿದೆ ಎಂದರು.

‘ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಬಿ.ಎಸ್. ಯಡಿಯೂರಪ್ಪ ಶ್ರಮಿಸಿದ್ದಾರೆ. ಶಿಕ್ಷಕರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಆದ್ಯತೆ ನೀಡಬೇಕು. ಡಿಸೆಂಬರ್ ತಿಂಗಳಿನಲ್ಲಿ ತಾಲ್ಲೂಕಿನಲ್ಲಿ ಶಿಕ್ಷಕರ ಸಮ್ಮೇಳನ ಆಯೋಜಿಸೋಣ’ ಎಂದುಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

‘ನಾವು ಈ ಹಂತಕ್ಕೆ ಬೆಳೆಯಲು ನಮ್ಮ ಗುರುಗಳಾದ ಶ್ರೀಧರ ಅವಧಾನಿಗಳು ಕಾರಣರಾಗಿದ್ದಾರೆ. ಮಕ್ಕಳನ್ನು ಗುಣವಂತರಾಗಿ ಹಾಗೂ ಸಂಸ್ಕಾರವಂತರನ್ನಾಗಿಸುವ ಜವಾಬ್ದಾರಿ ನಿಮ್ಮ ಮೇಲಿದೆ’ ಎಂದುಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಶಿಕ್ಷಕರಿಗೆ ಸಲಹೆ ನೀಡಿದರು.

‘ಶಿಕ್ಷಕರ ಸಮಸ್ಯೆಗಳಾದ ಗ್ರಾಮೀಣ ಕೃಪಾಂಕ, ವರ್ಗಾವಣೆ ಕಾಯ್ದೆ ನ್ಯೂನತೆ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಿದ್ದೇವೆ. ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆದ್ಯತೆ ನೀಡಿದ್ದಾರೆ. ಮುಖ್ಯಮಂತ್ರಿ ಆಕ್ಟೋಬರ್‌ನಲ್ಲಿ 7ನೇ ವೇತನ ಆಯೋಗ ಜಾರಿ ಮಾಡುವ ಭರವಸೆ ನೀಡಿದ್ದಾರೆ. ಭರವಸೆ ನೀಡುವಲ್ಲಿ ಯಡಿಯೂರಪ್ಪ ಅವರ ಪಾತ್ರವಿದೆ’ ಎಂದುರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ಹೊಸನಗರದ ಶಿಕ್ಷಕ ಎಚ್. ಬಸವನಗೌಡ ಉಪನ್ಯಾಸ ನೀಡಿದರು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುಸಿಂಗ್, ಮಾಜಿ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಶಿಕ್ಷಣ ಇಲಾಖೆ ಉಪನಿರ್ದೇಶಕ ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಡಿ. ಮಧುಕೇಶ್ವರ,ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ರಾಜ್ಯ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ದಿವಾಕರ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಬಿ.ಪಾಪಯ್ಯ, ಬಿ.ಆರ್. ಮಂಜಪ್ಪ, ಎಂ.ಜಿ. ಪ್ರಕಾಶ್, ನಾಗರಾಜನಾಯ್ಕ, ಅಂಜನಪ್ಪ, ವಿರೂಪಾಕ್ಷಪ್ಪ, ಆರ್.ಎಂ. ಘಾಸಿ, ಬಸವನಗೌಡ ಕೊಣ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT