ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗಂದೂರು ವಿವಾದದಲ್ಲಿ ಬಿಜೆಪಿಯಿಂದ ಒಡೆದು ಆಳುವ ನೀತಿ: ಗೋಪಾಲಕೃಷ್ಣ ಬೇಳೂರು

ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು
Last Updated 11 ನವೆಂಬರ್ 2020, 14:21 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಬಿಜೆಪಿ ಸರ್ಕಾರ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಗಂದೂರು ದೇವಸ್ಥಾನದ ಆಡಳಿತ ನಿರ್ವಹಣೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಲಹಾ ಸಮಿತಿ ರಚಿಸುವ ಅಗತ್ಯವಿಲ್ಲದಿದ್ದರೂ ಸರ್ಕಾರ ಅಂತಹ ಕ್ರಮ ಕೈಗೊಳ್ಳುವ ಮೂಲಕ ದೇವಸ್ಥಾನದ ಆಡಳಿತ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡಿರುವುದು ಸ್ಪಷ್ಟವಾಗಿದೆ’ ಎಂದು ಟೀಕಿಸಿದ್ದಾರೆ.

‘ಸಲಹಾ ಸಮಿತಿ ನೇಮಕ ಮಾಡಿರುವುದನ್ನು ಕೂಡಲೆ ರದ್ದುಗೊಳಿಸಬೇಕು ಎಂದು ಹಿಂದುಳಿದ ವರ್ಗಕ್ಕೆ ಸೇರಿದ ಎಲ್ಲಾ ಸಮುದಾಯಗಳೊಂದಿಗೆ ಸೇರಿ ಹೋರಾಟ ರೂಪಿಸಲಾಗುತ್ತಿದೆ. ಸಮಿತಿ ರದ್ದುಗೊಳಿಸಬೇಕು ಎಂದು ಈಡಿಗ ಸಮಾಜದ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದ್ದಾರೆ. ಹೀಗಿರುವಾಗ ಈಡಿಗ ಸಮಾಜದ ಮತ್ತೋರ್ವ ಗುರುಗಳಾದ ಗರ್ತಿಕೆರೆ ಮಠದ ರೇಣುಕಾನಂದ ಶ್ರೀಗಳನ್ನು ಸಲಹಾ ಸಮಿತಿಗೆ ಸರ್ಕಾರ ಸೇರಿಸಿರುವುದು ಒಡೆದು ಆಳುವ ನೀತಿಯಾಗಿದೆ’ ಎಂದು ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT