ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ ತೆರವುಗೊಳಿಸಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಸಿಬ್ಬಂದಿ

Last Updated 27 ಜೂನ್ 2020, 16:48 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ನಾಗವಳ್ಳಿ ಗ್ರಾಮದಿಂದ ಶನಿವಾರ ಕಾರ್ಗಲ್‌ನ ಪರೀಕ್ಷಾ ಕೇಂದ್ರಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಬಸ್ ನಲ್ಲಿ ಕರೆತರುತ್ತಿದ್ದಾಗ ಮಾರ್ಗ ಮಧ್ಯೆ ರಸ್ತೆಗೆ ಅಡ್ಡಲಾಗಿ ಮರವೊಂದು ಉರುಳಿ ಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಿಲ್ಲ.

ನಾಗವಳ್ಳಿ ಗ್ರಾಮದಿಂದ ಪರೀಕ್ಷಾ ಕೇಂದ್ರವು 50 ಕಿ.ಮೀ. ದೂರದಲ್ಲಿದ್ದು 16 ವಿದ್ಯಾರ್ಥಿಗಳನ್ನು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕರೆತರಲಾಗುತ್ತಿತ್ತು. ಈ ವೇಳೆಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಯ ಮಧ್ಯೆಉರುಳಿ ಬಿದ್ದಿದೆ. ಬಸ್ ಚಾಲಕ, ಶಿಕ್ಷಣ ಇಲಾಖೆಯ ಮಾರ್ಗಾಧಿಕಾರಿ ತಕ್ಷಣ ಕಾರ್ಯಪ್ರವೃತ್ತರಾಗಿ ಗ್ರಾಮಸ್ಥರ ನೆರವಿನಿಂದ ರಸ್ತೆಯಿಂದ ಮರವನ್ನು ತೆರವುಗೊಳಿಸಿ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT