ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೀರ್ಥಹಳ್ಳಿ: ‘ಕೂಸಿನ ಮನೆ’ ವಿರೋಧಿಸಿ ಪ್ರತಿಭಟನೆ ಫೆ. 8ಕ್ಕೆ

Published 2 ಫೆಬ್ರುವರಿ 2024, 15:46 IST
Last Updated 2 ಫೆಬ್ರುವರಿ 2024, 15:46 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ‘ಗ್ರಾಮ ಪಂಚಾಯಿತಿಗಳು ಕೂಸಿನಮನೆ ನಿರ್ಮಿಸಬೇಕು ಎಂಬ ಆದೇಶ ಅವೈಜ್ಞಾನಿಕವಾಗಿದೆ. ಅದನ್ನು ಖಂಡಿಸಿ ರಾಜ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಒಕ್ಕೂಟದಿಂದ ಫೆಬ್ರುವರಿ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಒಕ್ಕೂಟದ ಉಪಾಧ್ಯಕ್ಷ ಯು.ಡಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

‘ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಕೂಲಿ ಕಾರ್ಮಿಕರು, ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವ ಮಹಿಳೆಯರ 6 ತಿಂಗಳಿನಿಂದ 3 ವರ್ಷದೊಳಗಿನ ಮಕ್ಕಳ ಲಾಲನೆ– ಪಾಲನೆ ಮಾಡುವ ಉದ್ದೇಶದಿಂದ ಕೂಸಿನಮನೆ ಅಥವಾ ಶಿಶುಪಾಲನಾ ಕೇಂದ್ರ ಸ್ಥಾಪನೆ ಉದ್ದೇಶ ಸ್ವಾಗತಾರ್ಹ. ಆದರೆ, ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಕೂಸಿನ ಮನೆ ನಿರ್ಮಿಸಿದರೆ ಯೋಜನೆ ಸದುಪಯೋಗ ಆಗುವುದಿಲ್ಲ. ಇದು ಪಂಚಾಯಿತಿಗೆ ಹೊರೆಯಾಗಲಿದೆ’ ಎಂದು ಹೇಳಿದ್ದಾರೆ.

‘ಪಂಚಾಯಿತಿ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ನರೇಗಾ ಯೋಜನೆ ಕಾಮಗಾರಿ ನಡೆಯುತ್ತಿರುತ್ತದೆ. ಎಲ್ಲ ಮಕ್ಕಳನ್ನೂ ಒಂದೇ ಕೂಸಿನಮನೆಯಲ್ಲಿ ತಂದು ಬಿಡುವುದು ಅಸಾಧ್ಯ. ಅಲ್ಲದೇ ವರ್ಗ– 1ರಲ್ಲಿ ಹಣವೇ ಇಲ್ಲ. ಆದಗ್ಯೂ ರಾಜ್ಯದಲ್ಲಿ 4000 ಕೂಸಿನ ಮನೆಯನ್ನು ಪ್ರಾರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. 6 ತಿಂಗಳಿನಿಂದ 3 ವರ್ಷದೊಳಗಿನ ಮಕ್ಕಳ ಲಾಲನೆ, ಪಾಲನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ವಹಿಸುತ್ತಿದೆ. ಆ ಇಲಾಖೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಸದೃಢಗೊಳಿಸುವುದು ಸೂಕ್ತ. ಪ್ರತಿ ಗ್ರಾಮಗಳಲ್ಲೂ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಅದು ಸಹ ಕೂಸಿನ ಮನೆಯ ಕಲ್ಪನೆಯೇ ಆಗಿರುವುದರಿಂದ ಇಂತಹ ಅವೈಜ್ಞಾನಿಕ ಯೋಜನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT